HomeKarnatakaಸರ್ಕಾರಿ ಜಮೀನು ಒತ್ತುವರಿ ವಿರುದ್ಧ ಜಿಲ್ಲಾಡಳಿತ ಸಮರ ; ಅಂದ್ರಾಳ್ ಬೈಪಾಸ್ ಬಳಿ ತೆರವು ಕಾರ್ಯಾಚರಣೆ

ಸರ್ಕಾರಿ ಜಮೀನು ಒತ್ತುವರಿ ವಿರುದ್ಧ ಜಿಲ್ಲಾಡಳಿತ ಸಮರ ; ಅಂದ್ರಾಳ್ ಬೈಪಾಸ್ ಬಳಿ ತೆರವು ಕಾರ್ಯಾಚರಣೆ

ಬಳ್ಳಾರಿ : ಜಿಲ್ಲಾಡಳಿತವು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಬುಧವಾರ ಅಂದ್ರಾಳ್ ಬೈಪಾಸ್ ರಸ್ತೆಯ ಸಮೀಪ ಕಾರ್ಯಾಚರಣೆ ನಡೆಸಿತು.

ಅಂದ್ರಾಳ್ ಗ್ರಾಮದ ಸರ್ವೇ ನಂಬರ್ ಒಂದರಲ್ಲಿ ಸುಮಾರು 3 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಸಿಮೆಂಟ್ ಕಟ್ಟಡಗಳು ಮತ್ತು ಇತರ ನಿರ್ಮಾಣಗಳನ್ನು ಜಿಲ್ಲಾಡಳಿತವು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವುಗೊಳಿಸಿದೆ.

ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅವರು ಮಾತನಾಡಿ, ಜಿಲ್ಲಾಡಳಿತದ ಈ ದಿಟ್ಟ ಕ್ರಮವು ಸರ್ಕಾರಿ ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಈ ಒತ್ತುವರಿಯ ಹಿಂದೆ ಯಾರೇ ಇದ್ದರೂ ಮತ್ತು ಯಾರು ಪ್ರಚೋದನೆ ನೀಡುತ್ತಿದ್ದರೂ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಡಿಡಿಎಲ್‌ಆರ್ ಪ್ರಮೋದ್ ಸೇರಿದಂತೆ ಬಳ್ಳಾರಿ ತಾಲ್ಲೂಕು ತಹಸೀಲ್ದಾರ ಕಚೇರಿಯ ಅಧಿಕಾರಿ- ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular