BREAKING : ಸಿಎಂ ಸಿದ್ದರಾಮಯ್ಯಗೆ ನಾಡಹಬ್ಬ ದಸರಾದ ಅಧಿಕೃತ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ.!

ಮೈಸೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ಇಂದು ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು. ದಸರೆಯು ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಈ ನೆಲದ ಪರಂಪರೆ, ಕಲೆ, ಸಂಸ್ಕೃತಿಗಳನ್ನು ಶತಶತಮಾನಗಳಿಂದ ಅನನ್ಯವಾಗಿ ವಿಶ್ವಕ್ಕೆ ಸಾದರಪಡಿಸುತ್ತಿರುವ ಸಾಂಸ್ಕೃತಿಕ ಕಲಾ ಉತ್ಸವ. ದಸರಾ ಹಬ್ಬವು ಒಳಿತಿನ ವಿಜೃಂಭಣೆಯ, ನಾಡಿನ ಕಲಾವಂತಿಕೆ, ಸಾಹಸಗಳನ್ನು ಸಂಭ್ರಮಿಸುವ ಸಡಗರದ ಹಬ್ಬ, ಜನಮನದ ಹಬ್ಬ. ಈ ಹಬ್ಬದಲ್ಲಿ ಪಾಲ್ಗೊಳ್ಳಲು ನಾನು ಅತ್ಯಂತ ಉತ್ಸುಕನಾಗಿದ್ದೇನೆ. ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿ ವೈಮಾನಿಕ‌ ಪ್ರದರ್ಶನ ಕೂಡ ನಡೆಯಲಿದ್ದು, ಇದು ದಸರಾ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾವಿಸಿದ್ದೇನೆ. ಕರೆಯೋಲೆ ನೀಡಿ, ಪ್ರೀತಿಯಿಂದ ಆಹ್ವಾನಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳು. ಈ ಬಾರಿಯ ದಸರಾವನ್ನು ನಾವೆಲ್ಲರೂ ಜೊತೆಗೂಡಿ ಯಶಸ್ವಿಯಾಗಿಸೋಣ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read