HomeLatest Newsಸದ್ಯದಲ್ಲೇ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಜಿಬಿಎ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ: ತಕ್ಷಣವೇ ಸಿದ್ಧತೆಗೆ ಡಿಸಿಎಂ...

ಸದ್ಯದಲ್ಲೇ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಜಿಬಿಎ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ: ತಕ್ಷಣವೇ ಸಿದ್ಧತೆಗೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮುಂದಿನ ಎರಡು ಮೂರು ತಿಂಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಎರಡು ಮೂರು ತಿಂಗಳಲ್ಲಿ ಪಂಚಾಯತಿ ಚುನಾವಣೆ ನಡೆಯಲಿದೆ. ನ್ಯಾಯಾಲಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸೂಚಿಸಲಾಗಿದೆ. ಚುನಾವಣೆ ಎದುರಿಸಲು ತಕ್ಷಣದಿಂದಲೇ ತಯಾರಿ ಮಾಡಿಕೊಳ್ಳಿ ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷದ ಕೆಲಸ ಮಾಡುತ್ತಿರುವವರಿಗೆ ಮಾತ್ರ ಅವಕಾಶ ನೀಡಲಾಗುವುದು. ಮುಖ್ಯಮಂತ್ರಿಗಳು ಅಥವಾ ನನ್ನ ಹಿಂದೆ ಓಡಾಡಿಕೊಂಡಿದ್ದರೆ ಟಿಕೆಟ್ ಸಿಗುತ್ತದೆ ಎಂದು ಭಾವಿಸಬೇಡಿ, ತಕ್ಷಣದಿಂದಲೇ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡಿ ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳಿಗೆ ಚುನಾವಣೆ ನಡೆಯಲಿದ್ದು, ಸ್ಪರ್ಧಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ವಿತರಿಸಲಾಗುತ್ತಿದೆ. ತಲಾ 50 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಸಿಎಂ ಸಲಹೆಯಂತೆ ಪರಿಶಿಷ್ಟರು ಮತ್ತು ಮಹಿಳೆಯರಿಗೆ 25 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಜನವರಿ 15ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular