HomeLatest NewsBIG NEWS : ರಾಜ್ಯದ ಈ ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಕೂರಿಸದಂತೆ ಜಿಲ್ಲಾಧಿಕಾರಿ ಆದೇಶ

BIG NEWS : ರಾಜ್ಯದ ಈ ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಕೂರಿಸದಂತೆ ಜಿಲ್ಲಾಧಿಕಾರಿ ಆದೇಶ

ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬಂಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಕ್ಷÄಬ್ಧ ವಾತಾವರಣ ನಿರ್ಮಾಣವಾಗಿದ್ದು, ದ್ವೇಷದ ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಸಮಯ, ಸಂದರ್ಭಾನುಸಾರ ಕಾಯುತ್ತಿರುತ್ತಾರೆಂದು ಸಂಶಯ ಇದೆ.

ಹಾಗಾಗಿ, ಈ ಗ್ರಾಮಗಳಲ್ಲಿ ಗಣೇಶ ಹಬ್ಬ ಆಚರಣೆ ಮಾಡಿದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಸಂಭವವಿರುವುದರಿಂದ ಹಾಗೂ ಮುಂದೆ ನಡೆಯಬಹುದಾದ ಘಟನೆಗಳನ್ನು ತಡೆಹಿಡಿಯುವ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬಂಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular