HomeJobsಆರೋಗ್ಯ ಇಲಾಖೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆರೋಗ್ಯ ಇಲಾಖೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  www.koppal.nic.in ಜಿಲ್ಲಾ ವೆಬ್‌ಸೈಟ್‌ ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ಮೂಲ ದಾಖಲೆಗಳು ಹಾಗೂ ಎರಡು ಸ್ವಯಂ ದೃಢೀಕೃತ ನಕಲು ಪ್ರತಿಗಳೊಂದಿಗೆ ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ನೇರ ಸಂದರ್ಶನಕ್ಕೆ ಖುದ್ದಾಗಿ ಹಾಜರಾಗಬೇಕು.

ಹುದ್ದೆಗಳ ಅರ್ಹತೆ, ನೇಮಕಾತಿ ಷರತ್ತುಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿರುವ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಖಾಲಿ ಇರುವ ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುಷ್ಟಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ 12 ಶುಶ್ರೂಷಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷಗಳ ಸೇವಾ ಅನುಭವ ಇರುವ ಅರ್ಹ ಆಸಕ್ತ ಅಭ್ಯರ್ಥಿಗಳು  www.koppal.nic.in  ಜಿಲ್ಲಾ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ, ತಿಳಿಸಿರುವ ಸ್ಥಳಗಳಲ್ಲಿ ಸಂಬಂಧಿಸಿದ ಅಗತ್ಯ ಮೂಲ ದಾಖಲೆಗಳನ್ನು ಹಾಗೂ ಎರಡು ಸ್ವಯಂ ದೃಢೀಕೃತ ನಕಲು ಪ್ರತಿಗಳೊಂದಿಗೆ ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯೊಳಗಾಗಿ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್ ಅನ್ನು ವೀಕ್ಷಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular