HomeJobsಧಾರವಾಡ: ಒಂದು ಕಡೆ ಪ್ರತಿಭಟನೆ, ಮತ್ತೊಂದು ಕಡೆ ಉದ್ಯೋಗ ಮೇಳ

ಧಾರವಾಡ: ಒಂದು ಕಡೆ ಪ್ರತಿಭಟನೆ, ಮತ್ತೊಂದು ಕಡೆ ಉದ್ಯೋಗ ಮೇಳ

ಧಾರವಾಡದಲ್ಲಿ ಮಂಗಳವಾರ ವಿವಿಧ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ಧಾರವಾಡದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು.

ಧಾರವಾಡ ನಗರದ ಕೆಸಿಡಿ ಕಾಲೇಜು ಆವರಣದಲ್ಲಿ ಇಂದು ನಡೆದ ಉದ್ಯೋಗ ಮೇಳದಲ್ಲಿ ಒಟ್ಟು 3,085 ಅಭ್ಯರ್ಥಿಗಳು ಭಾಗವಹಿಸಿದ್ದರು. ವಿವಿಧ ಕ್ಷೇತ್ರಗಳ 122 ಕಂಪನಿಗಳು (ಉದ್ಯೋಗದಾತರು) ಮೇಳದಲ್ಲಿ ಹಾಜರಾಗಿ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಿದರು.

ಪ್ರಾಥಮಿಕ ಹಂತದ ಪರಿಶೀಲನೆ ನಂತರ 1,253 ಅಭ್ಯರ್ಥಿಗಳು ಅಂತಿಮ ಪಟ್ಟಿಗೆ (ಶಾರ್ಟ್ ಲಿಸ್ಟ್) ಆಯ್ಕೆಯಾಗಿದ್ದು, ಅಂತಿಮವಾಗಿ 719 ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಆಯ್ಕೆ ಮಾಡಿ, ಸ್ಥಳದಲ್ಲಿಯೇ ಆಫರ್ ಲೇಟರ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗ ಮೇಳದಲ್ಲಿ ಐಟಿ, ಉತ್ಪಾದನಾ ಕ್ಷೇತ್ರ, ಮಾರಾಟ, ಬ್ಯಾಂಕಿಂಗ್, ಶಿಕ್ಷಣ ಸೇರಿದಂತೆ ಹಲವು ವಿಭಾಗಗಳ ಕಂಪನಿಗಳು ಭಾಗವಹಿಸಿದ್ದವು. ಅಭ್ಯರ್ಥಿಗಳು ತಮ್ಮ ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ವಿವಿಧ ಸಂಸ್ಥೆಗಳ ಸಂದರ್ಶನದಲ್ಲಿ ಪಾಲ್ಗೊಂಡರು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ತಿಳಿಸಿದ್ದಾರೆ.

ಸಂತೋಷ್ ಲಾಡ್ ಹೇಳಿಕೆ: ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, “ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶಗಳಿಗಾಗಿ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ” ಎಂದು ಹೇಳಿದರು.

“ಧಾರವಾಡ ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸೀಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಡದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಪೀಡ್ ಬ್ಯಾಕ್ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ” ಎಂದರು.

“ಸರ್ಕಾರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40,000ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶವಾಗಿದೆ” ಎಂದು ತಿಳಿಸಿದರು.

“ಸರ್ಕಾರವು ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯನ್ನು ಬಜೆಟ್‍ನಲ್ಲಿ ತೆಗೆದುಕೊಂಡು ನಿರ್ಣಯ ಮಾಡಿದ್ದಾರೆ” ಎಂದು ಸಚಿವರು ಘೋಷಣೆ ಮಾಡಿದರು.

“ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನಿಸುತ್ತಿದ್ದು, ಯುವಕರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಸಚಿವ ಸಂತೋಷ ಲಾಡ್ ಕರೆ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular