HomeJobsಫೆಬ್ರವರಿ 21ರಂದು ಮಂಡ್ಯ, ದಕ್ಷಿಣ ಕನ್ನಡದಲ್ಲಿ ಉದ್ಯೋಗ ಮೇಳ

ಫೆಬ್ರವರಿ 21ರಂದು ಮಂಡ್ಯ, ದಕ್ಷಿಣ ಕನ್ನಡದಲ್ಲಿ ಉದ್ಯೋಗ ಮೇಳ

ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇದೆ. ಫೆಬ್ರವರಿ 21ರಂದು ಎರಡು ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಯಲಿದೆ. ವಿವಿಧ ಕಂಪನಿಗಳು ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಮಂಡ್ಯ ಉದ್ಯೋಗ ಮೇಳದ ಕುರಿತು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ ಎಂದು ಹೇಳಿದ್ದಾರೆ.

ಫೆಬ್ರವರಿ 21ರ ಶನಿವಾರದಂದು ಮಂಡ್ಯ ವಿಶ್ವವಿದ್ಯಾಲಯದ ಕಲಾಭವನದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ರೆಸ್ಯೂಮ್ ಜೊತೆಗೆ ಉದ್ಯೋಗ ಮೇಳಕ್ಕೆ ಹಾಜರಾಗಿ ಸ್ಥಳದಲ್ಲೇ ಸಂದರ್ಶನ ಎದುರಿಸಿ ನಿಮ್ಮ ಕನಸಿನ ಉದ್ಯೋಗವನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

ಐಟಿ, ಬ್ಯಾಂಕಿಂಗ್ ಹಾಗೂ ಉತ್ಪಾದನಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಅವಕಾಶಗಳು ನಿಮಗಾಗಿ ಕಾಯುತ್ತಿವೆ. ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಿ ಎಂದು ಸಚಿವರು ಕರೆ ನೀಡಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಉದ್ಯೋಗ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಡಿ.ಡಿ.ಯು-ಜಿಕೆವೈ ಎನ್.ಆರ್.ಎಲ್.ಎಂ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 21ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಬೆಂಗಳೂರು, ಮಂಗಳೂರು ಮತ್ತು ರಾಜ್ಯಾದ್ಯಂತ ಇರುವ ಸಾಫ್ಟ್‌ವೇರ್, ಮ್ಯಾನುಫ್ಯಾಕ್ಚರಿಂಗ್, ಆಟೋ ಮೊಬೈಲ್, ಬ್ಯಾಂಕಿಂಗ್, ಫೈನಾನ್ಸ್, ರಿಟೇಲ್ ಆ್ಯಂಡ್ ಸರ್ವಿಸ್ ಸೆಕ್ಟರ್,  ಎಜುಕೇಶನ್, ಹಾಸ್ಪಿಟಲ್ ಸುಮಾರು  80ಕ್ಕಿಂತ ಹೆಚ್ಚಿನ ಕಂಪನಿಗಳು ಪಾಲ್ಗೊಳ್ಳಲಿವೆ.

ಈ ಉದ್ಯೋಗ ಮೇಳದಲ್ಲಿ ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಿರುವುದು ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (ಡಿಡಿಯು-ಜಿಕೆ) ಕಾರ್ಯಕ್ರಮದ ವಾರ್ಷಿಕ ಯೋಜನೆ ಉಪ ಕಾರ್ಯಕ್ರಮವಾಗಿದೆ.

ಈ ಕಾರ್ಯಕ್ರಮದ ಉದ್ದೇಶ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕೌಶಲ್ಯಯುತ ಯುವ ಜನರಿಗೆ ಉದ್ಯೋಗ ಕಲ್ಪಿಸುವುದು. ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ಡಿಗ್ರಿ, ಇಂಜಿನಿಯರಿಂಗ್, ಮಾಸ್ಟರ್ ಡಿಗ್ರಿ, ನರ್ಸಿಂಗ್ ಅಥವಾ ಪ್ಯಾರಮೆಡಿಕಲ್ ಕೋರ್ಸ್ ಮಾಡಿದ ನಿರುದ್ಯೋಗಿ ಯುವಕ/ ಯುವತಿಯರು ಪಾಲ್ಗೊಳ್ಳಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಕನಿಷ್ಟ 15 ಸೆಟ್ ರೆಸ್ಯೂಮ್, ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು. ಆಸಕ್ತರು ಉದ್ಯೋಗ ಮೇಳದ ಸುದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular