HomeJobsರಾಮನಗರ: ಮಾರ್ಚ್ 5ರಂದು ಉದ್ಯೋಗ ಮೇಳ

ರಾಮನಗರ: ಮಾರ್ಚ್ 5ರಂದು ಉದ್ಯೋಗ ಮೇಳ

ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಒಂದಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದು ಸುವರ್ಣಾವಕಾಶವಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಹಾಗೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾರ್ಚ್ 5ರ ಗುರುವಾರ ಆಯೋಜಿಸಲಾಗಿದೆ.

ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ರ ತನಕ ಈ ಉದ್ಯೋಗ ಮೇಳ ನಡೆಯಲಿದೆ. ಹಲವಾರು ಪ್ರತಿಷ್ಠಿತ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಉದ್ಯೋಗ ಮೇಳದಲ್ಲಿ ಎಲ್ಲಾ ವಿದ್ಯಾರ್ಹತೆಯ ಅಭ್ಯರ್ಥಿಗಳು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ಹೆಸರು ನೋಂದಾಯಿಸಿಕೊಳ್ಳಲು ವಿಳಾಸ https://docs.google.com/forms/d/e/1FAIpQLSc07MZrMxk3jOe8ggmCSRAJe2b67VljqDe3L05tB8I1OSl4Gg/viewform?pli=1

ಉದ್ಯೋಗ ಮೇಳಕ್ಕೆ ಬರುವಾಗ ಬಯೋಡೆಟಾ, ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್ ತರಬೇಕು ಎಂದು ಮನವಿ ಮಾಡಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 7090763882.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular