ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(3 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾಸಿಕ ವೇತನ ರೂ. 25 ಸಾವಿರ ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಮಾಸಿಕ ವೇತನ ರೂ.20 ಸಾವಿರ ಆಗಿರುತ್ತದೆ.
ಅಭ್ಯರ್ಥಿಗೆ ಅರ್ಹತೆಗಳು: ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ನೀಡಲಾಗುವುದು. ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೊ ವ್ಯಾಸಂಗ ಮಾಡಿದವರಿಗೂ ಸಹ ಅವಕಾಶ ನೀಡಲಾಗುವುದು.
ಕಡ್ಡಾಯವಾಗಿ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಾಗಿರಬೇಕು. ಕಂಪ್ಯೂಟರ್ ಬಳಕೆಯ ಕನಿಷ್ಟ ಜ್ಞಾನ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೋ ಇನ್ ಆಕ್ಸಿಲರಿ ನರ್ಸ್ ಮಿಡ್‍ವೈಪ್ರೇ(ಎಎನ್‍ಎಂ) ಮತ್ತು ಜನರಲ್ ನರ್ಸಿಂಗ್ ಮಿಡ್‍ವೈಪ್ರೇ(ಜಿಎನ್‍ಎಂ) ಪಡೆದಿರಬೇಕು.
ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ಕಲ್ಪಿಸಲಾಗುವುದು.
ಕಡ್ಡಾಯವಾಗಿ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರೇ ಆಗಿರಬೇಕು. ಕಂಪ್ಯೂಟರ್ ಬಳಕೆಯ ಕನಿಷ್ಟ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು ಸ್ಥಳೀಯರಾಗಿರಬೇಕು ಅಥವಾ ನಿರ್ಧಿಷ್ಟ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರುವವರಾಗಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಗೆ ಅರ್ಜಿಯನ್ನು ಜನವರಿ 17ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, (ಲೋಕೋಪಯೋಗಿ ಇಲಾಖೆಯ ಕಟ್ಟಡದ ಹತ್ತಿರ, ಕಾನ್ವೆಂಟ್ ಜಂಕ್ಷನ್) ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು.
ಮಾಹಿತಿಗಾಗಿ ದೂರವಾಣಿ ಸಂಖ್ಯೆ 9353799851, 8861957577 ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.

