HomeKarnatakaಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು: ರಾಜ್ಯದ 11 ಜಿಲ್ಲೆಗಳಲ್ಲಿ ತುಂತುರು ಮಳೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು: ರಾಜ್ಯದ 11 ಜಿಲ್ಲೆಗಳಲ್ಲಿ ತುಂತುರು ಮಳೆ ಮುನ್ಸೂಚನೆ

ಬೆಂಗಳೂರು: ನಾಳೆ ರಾಜ್ಯದ 11 ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಭಾಗದ ಕೆಲವು ಕಡೆ ತುಂತುರು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ, ಮಳೆ ಮಾರುತಗಳು ಚುರುಕಾಗಿರುವುದರಿಂದ ದಕ್ಷಿಣ ಒಳನಾಡಿನ ಅನೇಕ ಭಾಗದಲ್ಲಿ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವ ಇದೆ.

ಉಳಿದ ಸ್ಥಳಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮಂಗಳವಾರದಿಂದ ಬಹುತೇಕ ಭಾಗದಲ್ಲಿ ಒಣಹವೆ ಇರುತ್ತದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular