HomeKarnatakaಗಮನಿಸಿ: ಇಂದು, ನಾಳೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಗಮನಿಸಿ: ಇಂದು, ನಾಳೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಶನಿವಾರ ಮತ್ತು ಭಾನುವಾರ ಕೂಡ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ರಾಯಚೂರು, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆ ಆಗಲಿದೆ. ಈ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ, ಹಾಸನ, ಮಂಡ್ಯ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆ ಆಗಲಿದ್ದು, ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular