ಬೆಂಗಳೂರು : ದಿತ್ವಾ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಡಿಸೆಂಬರ್ 1ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 30ರಂದು ದಿತ್ವಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ದಿತ್ವಾ ಚಂಡಮಾರುತ ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದನೈಋುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿದ್ದು ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆ ಇರಲಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ,ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆಯಿದೆ ಎನ್ನಲಾಗಿದೆ.
