BIG NEWS : ‘ವಿವಾಹ ವಿಚ್ಚೇದನ’ ಪ್ರಕರಣ 1 ವರ್ಷದೊಳಗೆ ಇತ್ಯರ್ಥಪಡಿಸಿ : ಹೈಕೋರ್ಟ್ ನಿರ್ದೇಶನ

ಬೆಂಗಳೂರು : ವಿವಾಹ ವಿಚ್ಚೇದನ ಪ್ರಕರಣವನ್ನು 1ವರ್ಷದೊಳಗೆ ಇತ್ಯರ್ಥಪಡಿಸಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ವಿವಾಹ ವಿಚ್ಚೇದನ ಪ್ರಕರಣವನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಎನ್ ರಾಜೀವ್ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ನಿರ್ದೇಶನ ನೀಡಿದೆ.

ಕೌಟುಂಬಿಕ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬವಾದರೆ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ, ಆದ್ದರಿಂದ ವಿವಾಹ ವಿಚ್ಚೇದನ ಪ್ರಕರಣವನ್ನು 1ವರ್ಷದೊಳಗೆ ಇತ್ಯರ್ಥಪಡಿಸಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಮದುವೆಯ ವಿಸರ್ಜನೆ ಅಥವಾ ಅನೂರ್ಜಿತತೆ ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದರು.

ವೈವಾಹಿಕ ಪ್ರಕರಣಗಳಲ್ಲಿ ತ್ವರಿತ ತೀರ್ಪು ನೀಡಿದಲ್ಲಿ ಇಬ್ಬರೂ ತಮ್ಮ ಜೀವನವನ್ನು ಪುನರ್ ರೂಪಿಸಿಕೊಳ್ಳಬಹುದು, ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕಿದೆ ಎಂದು ಹೈಕೋರ್ಟ್ ಹೇಳಿದೆ. ಅರ್ಜಿದಾರ ರಾಜೀವ್ ಅವರ ಪ್ರಕರಣವನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಬೆಂಗಳೂರಿನ 5ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಸೂಚಿಸಿದೆ. ತನ್ನ ವಿವಾಹವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ 2016ರಲ್ಲಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ರಾಜೀವ್ ಸಲ್ಲಿಸಿದ್ದರು. ಆದರೆ, ಕಳೆದ ಏಳು ವರ್ಷಗಳಿಂದ ಅರ್ಜಿ ವಿಲೇವಾರಿಯಾಗಿಲ್ಲ, ಈ ಹಿನ್ನೆಲೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read