HomeKarnatakaವಿಚ್ಛೇದಿತೆ ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ

ವಿಚ್ಛೇದಿತೆ ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ

ಮೈಸೂರು: ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಪ್ರಕರಣ ನಡೆದಿದೆ.

34 ವರ್ಷದ ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿದ 25 ವರ್ಷದ ಯುವಕ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ಮಹಿಳೆ ಗರ್ಭಿಣಿಯಾದ ಬಳಿಕ ನಾಪತ್ತೆಯಾಗಿದ್ದು, ಘಟನೆ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ 2018 ರಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ತೇರಂಬಳ್ಳಿ ಗ್ರಾಮದ ಹರೀಶ್ ನ ಪರಿಚಯವಾಗಿದೆ. ಇಬ್ಬರೂ ಹವ್ಯಾಸಿ ಹಾಡುಗಾರರಾಗಿದ್ದು, ಆಗಾಗ ಭೇಟಿಯಾಗುತ್ತಿದ್ದರು. ಒಮ್ಮೆ ಮದ್ಯ ಕೊಡಿಸಿ ಬಲವಂತವಾಗಿ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಗರ್ಭಿಣಿಯಾದ ನಂತರ ಸ್ಟಾಫ್ ನರ್ಸ್ ಆಗಿರುವ ಸಂಬಂಧಿ ಸಹಾಯದಿಂದ ಗರ್ಭಪಾತದ ಮಾತ್ರೆಗಳನ್ನು ತರಿಸಿ ಮಹಿಳೆಗೆ ನೀಡಿದ್ದ. ಮದುವೆಗೆ ಒಪ್ಪದ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular