HomeLatest Newsದೀಪಾವಳಿ ಪಟಾಕಿ ಮಾರಾಟ: 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

ದೀಪಾವಳಿ ಪಟಾಕಿ ಮಾರಾಟ: 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular