BIG NEWS: ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಕಾಲಾವಕಾಶ: ಕತ್ತಲೆಯಿಂದ ಬೆಳಕಿನೆಡೆ ಹೋಗುವಾಗ ಪರಿಸರ ಮಾಲಿನ್ಯ ಬೇಡ: ಅರಣ್ಯ ಸಚಿವ ಈಶ್ವರ ಖಂಡ್ರೆ ಸಲಹೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲವೇದಿನಗಳು ಬಾಕಿ ಇದೆ. ಪಟಾಕಿ ಸಂಭ್ರಮಕ್ಕೆ ಈ ಬಾರಿ ರಾಜ್ಯ ಸರ್ಕಾರ ಎರಡುಗಂಟೆಗಳ ಸಮಯಾವಕಾಶ ನಿಗದಿ ಮಾಡಿದೆ.

ರಾತ್ರಿ 8ಗಂಟೆಯಿಂದ 10ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು.

ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು.

ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read