HomeKarnatakaಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ನಿಷೇಧ: ತೆಪ್ಪ ಬಳಕೆಗೆ ನಿಬಂಧನೆ

ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ನಿಷೇಧ: ತೆಪ್ಪ ಬಳಕೆಗೆ ನಿಬಂಧನೆ

ಶಿವಮೊಗ್ಗ: ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ, ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪ ಬಳಸಲು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಅವಕಾಶ ನೀಡಿ ಆದೇಶಿಸಿದ್ದಾರೆ.

ತೆಪ್ಪದ ಮೂಲಕ ಗಣೇಶ ವಿಸರ್ಜನೆ ಮಾಡುವ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಪ್ಪಿಸಲು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಡ್ಡಾಯವಾಗಿ ಲೈಫ್-ಜಾಕೆಟ್, ನುರಿತ ಈಜುಗಾರರು ಇದ್ದು ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಗಣೇಶ ವಿಸರ್ಜನೆ, ಈದ್ ಮಿಲಾದ್ ಆಚರಣೆ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ

ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 18ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ. 28 ರಿಂದ ಸೆ. 30 ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular