HomeIndiaSHOCKING : ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತ ; ಕುಸಿದು ಬಿದ್ದು ಪಿಯು...

SHOCKING : ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತ ; ಕುಸಿದು ಬಿದ್ದು ಪಿಯು ವಿದ್ಯಾರ್ಥಿ ಸಾವು, ವಿಡಿಯೋ ವೈರಲ್ |WATCH VIDEO

ಮದುವೆ ಸಂಭ್ರಮದಲ್ಲಿ ಎಲ್ಲರೂ ಖುಷಿಯಾಗಿ ಕಾಲ ಕಳೆಯುತ್ತಿದ್ದರು. ಸ್ನೇಹಿತರು ಹಾಗೂ ಕುಟುಂಬಸ್ಥರಿಂದ ಮನೆ ತುಂಬಾ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಜೋರಾಗಿ DJ ಹಾಕಿ ಹಾಡುಗಳಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಯಾರೂ ನಿರೀಕ್ಷಿಸದ ದುರ್ಘಟನೆ ಸಂಭವಿಸಿದೆ.

DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಪಿಯು ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ನೇಹಿತನ ಮನೆಯ ಮದುವೆ ಸಂಭ್ರಮದಲ್ಲಿ DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಕೋಸ್ಗಿಯಲ್ಲಿ ನಡೆದಿದೆ.

ನಾರಾಯಣಪೇಟೆ ಜಿಲ್ಲೆಯ ಕೋಸ್ಗಿ ಪುರಸಭೆ ವ್ಯಾಪ್ತಿಯ ಪೊತಿರೆಡ್ಡಿಪಲ್ಲಿಗೆ ಸೇರಿದ ದಸ್ತಯ್ಯ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ರವಿತೇಜ (17) ಮೃತಪಟ್ಟ ವಿದ್ಯಾರ್ಥಿ. ರವಿತೇಜ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ ರಾತ್ರಿ ಸ್ನೇಹಿತನ ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ರವಿತೇಜ ಅಲ್ಲಿಗೆ ತೆರಳಿದ್ದನು. ಸ್ನೇಹಿತರೆಲ್ಲರೂ ಸೇರಿ ಮದುವೆ ಸಂಭ್ರಮದಲ್ಲಿ ಖುಷಿಯಿಂದ ಕಾಲ ಕಳೆಯುತ್ತಿದ್ದರು. ಈ ವೇಳೆ DJ ಹಾಡುಗಳಿಗೆ ಎಲ್ಲರೂ ಡ್ಯಾನ್ಸ್ ಮಾಡುತ್ತಿದ್ದರು.

ಆದರೆ, ಡ್ಯಾನ್ಸ್ ಮಾಡುತ್ತಿದ್ದ ರವಿತೇಜ ಹಠಾತ್ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದಾನೆ. ಕೂಡಲೇ ಸ್ನೇಹಿತರು ಹಾಗೂ ಸ್ಥಳೀಯರು ಆತನನ್ನು ಕೋಸ್ಗಿ ಸರ್ಕಾರಿ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು, ರವಿತೇಜ ಈಗಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರು ಹಾಗೂ ಸ್ನೇಹಿತರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಕೆಲವೇ ಕ್ಷಣಗಳ ಹಿಂದೆ ತಮ್ಮೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದು ಎಲ್ಲರನ್ನೂ ಆಘಾತಕ್ಕೀಡು ಮಾಡಿದೆ. ಈ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿರುವ ಹಿನ್ನೆಲೆಯಲ್ಲಿ ಅತಿಯಾದ ಶಬ್ದದ DJ ಸೌಂಡ್ ಹಾಗೂ ಡ್ಯಾನ್ಸ್ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಹಲವರು ಸಲಹೆ ನೀಡುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular