HomeKarnatakaಗಣೇಶೋತ್ಸವ ಹಾಗೂ ಈದ್ ಮಿಲಾದ್ ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ - ಬೈಕ್‌ ರ್ಯಾಲಿ ನಿಷೇಧ

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ – ಬೈಕ್‌ ರ್ಯಾಲಿ ನಿಷೇಧ

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 07 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ.16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆಯನ್ನು ನಿಷೇದಿಸಲಾಗಿದೆ.

ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 06 ರಿಂದ ಸೆ. 20 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ ನಡೆಸುವುದನ್ನು ನಿಷೇದಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular