HomeKarnatakaಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಡಿಕೆಶಿ ಷಡ್ಯಂತ್ರ : ಯತ್ನಾಳ್ ಹೊಸ ಬಾಂಬ್

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಡಿಕೆಶಿ ಷಡ್ಯಂತ್ರ : ಯತ್ನಾಳ್ ಹೊಸ ಬಾಂಬ್

ವಿಜಯಪುರ : ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ದೊಡ್ಡ ಷಡ್ಯಂತ್ರ ನಡೆದಿದೆ. ಅದಕ್ಕಾಗಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಓಡಾಡುತ್ತಿದ್ದಾರೆ.  ಡಿ.ಕೆ. ಶಿವಕುಮಾರ್ ಪರ 70 ಶಾಸಕರು, ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಎನ್ನುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರಾದ ಜಮೀರ್ ಅಹ್ಮದ್ ಖಾನ್, ಎಂ.ಬಿ.ಪಾಟೀಲ್, ರಾಜಣ್ಣ ಅವರು ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎನ್ನುತ್ತಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular