BREAKING: ಕರಗದಲ್ಲಿ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಸಿಎಂ ಡಿ.ಕೆ. ಮಹತ್ವದ ಹೇಳಿಕೆ

ರಾಮನಗರ: ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಭಾಷಣದ ವೇಳೆ ನಟ ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ನಟ ದರ್ಶನ್ ಪತ್ನಿ ಭೇಟಿ ಮಾಡಲು ಸಮಯ ಕೇಳಿದ್ದಾರೆ. ಬುಧವಾರ ಬೆಳಿಗ್ಗೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಕರಗ ಮಹೋತ್ಸವದಲ್ಲಿ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read