HomeIndiaಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

ಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

ಮುಖ್ಯಮಂತ್ರಿಯಾಗುವ ಉತ್ಸಾಹದಲ್ಲಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. 2026ರಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಈ ತೀರ್ಮಾನ ಕೈಗೊಂಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಚುನಾವಣೆ ನಡೆಯುವ 5 ರಾಜ್ಯಗಳಿಗೆ ಎಐಸಿಸಿ ಹಿರಿಯ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಿಂದ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರಿಗೆ ಉಸ್ತುವಾರಿಯನ್ನು ಕೊಡಲಾಗಿದೆ.

ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯದ ಎಐಸಿಸಿ ಹಿರಿಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಈ ವರ್ಷ ಅಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಹಾಲಿ ರಾಜ್ಯದಲ್ಲಿದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ಸಾಂ ಉಸ್ತುವಾರಿಗಳು

  • ಭೂಪೇಶ್ ಬಘೇಲ್
  • ಡಿ.ಕೆ.ಶಿವಕುಮಾರ್
  • ಬಂಧು ಟರ್ಕಿ

ಕೇರಳ ರಾಜ್ಯದ ಉಸ್ತುವಾರಿಗಳು

  • ಸಚಿನ್ ಪೈಲೆಟ್
  • ಕೆ.ಜೆ.ಜಾರ್ಜ್
  • ಇಮ್ರಾನ್ ಪ್ರತಾಪ್ ಗಡಿ
  • ಕನ್ನಯ್ಯ ಕುಮಾರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ಸಾಂ, ಕೇರಳ, ತಮಿಳುನಾಡು & ಪುದುಚೇರಿ, ಪಶ್ಚಿಮ ಬಂಗಾಳ ರಾಜ್ಯಗಳಿಗೆ ಎಐಸಿಸಿ ಹಿರಿಯ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಕರ್ನಾಟಕದ ಇಬ್ಬರ ನಾಯಕರಿಗೆ ಮಾತ್ರ ಜವಾಬ್ದಾರಿ ವಹಿಸಲಾಗಿದೆ.

ಅಸ್ಸಾಂ, ಕೇರಳ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಕೇರಳದಲ್ಲಿ ಎರಡು ಬಾರಿ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರ ರಚನೆ ಮಾಡಿದೆ. ಈ ಬಾರಿ ಆಡಳಿತ ವಿರೋಧಿ ಅಲೆ ಇದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ.

ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದು, ವಿಧಾನಸಭೆ ಚುನಾವಣೆಯನ್ನು ಗೆಲ್ಲುವ ಭರವಸೆಯಲ್ಲಿದೆ. ಆದ್ದರಿಂದ ವೀಕ್ಷಕರನ್ನು ನೇಮಕ ಮಾಡಿದ್ದು, ಕೆ.ಜೆ.ಜಾರ್ಜ್ ಅವರನ್ನು ಕರ್ನಾಟಕದಿಂದ ವೀಕ್ಷಕರಾಗಿ ನೇಮಿಸಲಾಗಿದೆ.

ಅಸ್ಸಾಂ ರಾಜ್ಯ: ಅಸ್ಸಾಂ ರಾಜ್ಯದಲ್ಲಿ ಮಾರ್ಚ್/ ಏಪ್ರಿಲ್‌ ತಿಂಗಳಿನಲ್ಲಿ 126 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಹಾಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಹಿಮಂತ ಬಿಸ್ವಾ ಶರ್ಮಾ ಮುಖ್ಯಮಂತ್ರಿ.

2021ರ ಚುನಾವಣೆಯಲ್ಲಿ ಬಿಜೆಪಿ 60, ಕಾಂಗ್ರೆಸ್ 29, ಎಐಯುಡಿಎಫ್ 16, ಎಜಿಪಿ 9, ಯುಪಿಪಿಎಲ್ 6, ಐಎನ್‌ಡಿ 1, ಇತರರು 5 ಸೀಟುಗಳಲ್ಲಿ ಜಯಗಳಿಸಿದ್ದರು. ಅಸ್ಸಾಂನಲ್ಲಿ ಈ ಭಾರಿ ಅಧಿಕಾರ ಹಿಡಿಯುವ ಮೂಲಕ ಈಶಾನ್ಯ ರಾಜ್ಯಗಳಲ್ಲಿ ತನ್ನ ಪ್ರಭಾವ ತೋರಿಸಲು ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular