HomeKarnatakaಬಿಡುಗಡೆಯಾಗದ ಬಿಜೆಪಿ ಪಟ್ಟಿ: ಡಿಕೆಶಿ ಟಾಂಗ್

ಬಿಡುಗಡೆಯಾಗದ ಬಿಜೆಪಿ ಪಟ್ಟಿ: ಡಿಕೆಶಿ ಟಾಂಗ್

ಬಿಜೆಪಿ ಇದುವರೆಗೂ ಒಬ್ಬ ಅಭ್ಯರ್ಥಿಯ ಹೆಸರನ್ನೂ ಬಿಡುಗಡೆ ಮಾಡಿಲ್ಲ. ಈಶ್ವರಪ್ಪ ಅವರು ತಮ್ಮ ಹೈಕಮಾಂಡ್ ನಾಯಕರಿಗೆ ಲವ್ ಲೆಟರ್ ಬರೆದಿದ್ದಾರೆ. ಅವರನ್ನು ಕೇಳದೇ ಕೇವಲ ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಮಾತ್ರ ಕೇಳುತ್ತಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈಗಾಗಲೇ 167 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದೆ. ಉಳಿದ ಕ್ಷೇತ್ರಗಳ ಪಟ್ಟಿ ಕೂಡ ಸಧ್ಯದಲ್ಲೇ ಬಿಡುಗಡೆ ಆಗಲಿದೆ. ಏನೇ ನಿರ್ಧಾರ ತೆಗೆದುಕೊಂಡರೂ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ. ಕಾಂಗ್ರೆಸ್ ಪಕ್ಷ ಮಾಧ್ಯಮಗಳನ್ನು ಬಿಟ್ಟು ರಾಜಕೀಯ ಮಾಡುವುದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಳಿದ ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆ ಆಗಬಹುದು ಎಂದು ಕೇಳಿದಾಗ, ‘ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಪಟ್ಟಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಕೇಳಿದಾಗ, ಲಕ್ಷ್ಮಣ ಸವದಿ ಹಿರಿಯ ನಾಯಕರು. ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರಸ್ತಾಪವಾಗಿಲ್ಲ. ಸೋಮಣ್ಣ ಅವರು ಕೂಡ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಸುದ್ದಿಯಾಯಿತು. ಆದರೆ ಅವರು ಯಾವತ್ತೂ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಮಾಡಿಲ್ಲ. ಶಿವಮೊಗ್ಗ, ಹಾವೇರಿ ಇತರೆ ಭಾಗಗಳ ಕೆಲ ನಾಯಕರು ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಅವರು ಬಂದಾಗ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಖಾಲಿ ಇಲ್ಲದಿದ್ದರೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

ಈಶ್ವರಪ್ಪ ರಾಜಕೀಯ ನಿವೃತ್ತಿ ಕುರಿತು ಕೇಳಿದ ಪ್ರಶ್ನೆಗೆ, ಅವರಿಗೆ ಒಳ್ಳೆಯದಾಗಲಿ. ಅವರು ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದರು. ಅವರ ಪಕ್ಷ ಹಾಗೂ ಅವರ ತೀರ್ಮಾನ, ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಸೋಲುತ್ತಾರೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, ಅವರ ಪಕ್ಷ, ಕುಟುಂಬದ ವಿಚಾರದ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಅವರ ರಾಜಕೀಯ ಅವರು ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅವರ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಅವರ ಜತೆ ನಾವು ಕೆಲಸ ಮಾಡಿ ಈಗ ಅವರು ಸರಿ ಇಲ್ಲ ಎಂದು ದೂರುವುದು ಸರಿಯಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular