HomeKarnatakaಸಚಿವ ಸ್ಥಾನಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಂಪುಟ ವಿಸ್ತರಣೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಮಾಹಿತಿ

ಸಚಿವ ಸ್ಥಾನಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಂಪುಟ ವಿಸ್ತರಣೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಯಲಿದ್ದು, ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಿನ ಅಧಿವೇಶನ ನಡೆಯಲಿದ್ದು, ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ನಂತರ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮತ್ತು ಸಚಿವರಿಗೆ ಖಾತೆ ಹಂಚಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಆಗೇ ಆಗುತ್ತದೆ. ಕಾನೂನು ಪ್ರಕಾರ ಮೇ 24ರ ಒಳಗೆ ಹಳೆಯ ಸರ್ಕಾರ ವಿಸರ್ಜನೆಯಾಗಬೇಕಿದ್ದು, ರಾಜ್ಯಪಾಲರು ಮೇ 25 ರಂದು ರಾಜ್ಯದಲ್ಲಿ ಇರುವುದಿಲ್ಲವೆಂದು ತಿಳಿಸಿದ್ದಾರೆ. ಹೀಗಾಗಿ ಮೇ 22 ರಿಂದ 3 ದಿನ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಅಧಿವೇಶನ ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular