HomeKarnatakaಪನ್ನೀರ್‌ಸೆಲ್ವಂ ಆಗಲಿ, ಯಾರೇ ಆಗಲಿ ಕನಿಷ್ಠ ಸಂಸ್ಕೃತಿ ಇರಬೇಕು: ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ...

ಪನ್ನೀರ್‌ಸೆಲ್ವಂ ಆಗಲಿ, ಯಾರೇ ಆಗಲಿ ಕನಿಷ್ಠ ಸಂಸ್ಕೃತಿ ಇರಬೇಕು: ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನೀರ್ ಸೇಲ್ವಂ ಅವರ ಹೇಳಿಕೆ ವಿಚಾರವಾಗಿ ಬೆಂಗಳುರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು ಎಂದರು.

ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹನೂರು ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿಕೆ ಬಗ್ಗೆ ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕು ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular