HomeKarnatakaಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ.

14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಕ್ಷಿಣದ ಕಾಂಗ್ರೆಸ್ ಶಾಸಕರಿಗೆ ಜವಾಬ್ದಾರಿ ನೀಡಿದ್ದಾರೆ.

ಆಡಳಿತರೂಢ ಕಾಂಗ್ರೆಸ್ ಪಕ್ಷದ ದಕ್ಷಿಣ ಕರ್ನಾಟಕದ 49 ಶಾಸಕರನ್ನು ಎರಡನೇ ಹಂತದಲ್ಲಿ ಉತ್ತರ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಿಗೆ ನಿಯೋಜಿಸಲಾಗಿದೆ. ಹಿರಿಯ ಸಚಿವರಿಗೆ ಲೋಕಸಭಾ ಕ್ಷೇತ್ರವಾರು ಹೆಚ್ಚುವರಿ ಉಸ್ತುವಾರಿ ನೀಡಿದ ನಂತರ ಪಕ್ಷದ ಶಾಸಕರನ್ನು ಕೂಡ ವಿಧಾನಸಭಾ ಕ್ಷೇತ್ರವಾರು ವೀಕ್ಷಕರಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಹಂತದ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳ ವ್ಯಾಪ್ತಿಯ 49 ಶಾಸಕರಿಗೆ ಉತ್ತರ ಕರ್ನಾಟಕ ಭಾಗದಲ್ಲಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಸಂಬಂಧಿತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಉಳಿದು ಸ್ಥಳೀಯ ನಾಯಕರೊಂದಿಗೆ ಸಮನ್ವಯತೆ ಕಾಯ್ದುಕೊಂಡು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗುವಂತೆ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular