HomeKarnatakaಪಂಚಾಯಿತಿ, ಪಾಲಿಕೆ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಎಸ್ಐಆರ್ ನಂತರ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್

ಪಂಚಾಯಿತಿ, ಪಾಲಿಕೆ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಎಸ್ಐಆರ್ ನಂತರ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್

ಬೆಂಗಳೂರು: ಎಸ್ಐಆರ್ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ಒಳಗೆ ಪಂಚಾಯತಿ ಹಾಗೂ ಪಾಲಿಕೆ ಚುನಾವಣೆಗಳನ್ನು ನಡೆಸಲಾಗುವುದು. ಎಸ್ ಐ ಆರ್ ಮುಗಿದ ತಕ್ಷಣ ಚುನಾವಣೆ ನಡೆಸಲು ಆಯೋಗಕ್ಕೆ ಪತ್ರ ಬರೆಯಲಾಗುವುದು. ಗ್ರಾಮೀಣ ಹಾಗೂ ತಾಲ್ಲೂಕುಗಳಿಂದ ಜನರ ವಲಸೆ ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡುವಂತೆ ಶಾಸಕರಿಗೆ ತಿಳಿಸಲಾಗಿದೆ ಎಂದರು.

ವಿರೋಧ ಪಕ್ಷದವರಿಗೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿರೋಧ ಪಕ್ಷದವರಿಗೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯವೇ ಮುಖ್ಯ. ಡಿಸಿಎಂ ಅವರು ಶೀಘ್ರವೇ ಬರಪೀಡಿತ ತಾಲ್ಲೂಕುಗಳನ್ನು ಪ್ರಕಟಿಸಲಿದ್ದಾರೆ. ಕುಡಿಯುವ ನೀರಿಗೆ 1 ಕೋಟಿ ರೂ. ನೀಡಲಾಗಿದೆ. 102 ತಾಲ್ಲೂಕುಗಳ ಪ್ರವಾಸ ಮತ್ತು ಅಧ್ಯಯನ ಮುಕ್ತಾಯವಾದ ನಂತರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲಾಗುವುದು.

5,000ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳು:

ಬೆಂಗಳೂರು ನಗರಕ್ಕೆ ಹಸಿರು ಹೊದಿಕೆ ಹೆಚ್ಚಿಸಲು ತುರಹಳ್ಳಿ ಅರಣ್ಯ, ತೊಟ್ಟಿಕಲ್ಲು ಜಲಪಾತ, ಬಿಎಂ ಕಾವಲ್ ಅರಣ್ಯ, ಬಸವಂತಪುರ, ಮಂಡೂರು ಹಾಗೂ ಜ್ಯೋತಿಪುರ ಸೇರಿದಂತೆ ಒಟ್ಟು 5,000ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದರ ಮೂಲಕ ಬೆಂಗಳೂರಿನಲ್ಲಿ ಹಸಿರು ಪ್ರದೇಶ ವಿಸ್ತರಣೆ, ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಒತ್ತು ನೀಡಲಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಎಸ್ಐಆರ್ – ಅರ್ಹ ಮತದಾರರ ಹಕ್ಕು ಉಳಿಸಲು ಸರ್ಕಾರ ಬದ್ಧ:

ಎಸ್ಐಆರ್ ಪ್ರಕ್ರಿಯೆಯಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಜನರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಖಾಯಂ ನಿವಾಸ ಪತ್ರ, ಜಾತಿ ಪ್ರಮಾಣ ಪತ್ರವನ್ನು ಸರ್ಕಾರದಿಂದ ಒದಗಿಸಲಾಗುತ್ತಿದೆ. ಬೂತ್ ಮಟ್ಟದಲ್ಲಿ ಸಭೆ ನಡೆಸಿ ಮತಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರನ್ನು ಕೋರಲಾಗಿದೆ. ಜನರಿಗೆ ಮತದ ಶಕ್ತಿ ಹಾಗೂ ಮತದ ಹಕ್ಕಿನ ಬಗ್ಗೆ ಶಾಸಕರು ಅರಿವು ಮೂಡಿಸಬೇಕು. ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಜನರಿಗೆ ಮತದಾನದ ಹಕ್ಕು ಕೊಡಿಸಲು ಶ್ರಮಿಸಬೇಕೆಂದು ಶಾಸಕರಿಗೆ ಮಾರ್ಗದರ್ಶನ ನೀಡಲಾಗಿದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular