ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲು ಹೈಕಮಾಂಡ್ ಎರಡು ವರ್ಷ ಅಧಿಕಾರ ಹಂಚಿಕೆ ಸೂತ್ರ: ಡಿಸಿಎಂ ಡಿಕೆಶಿ

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರದ ಅವಕಾಶ ಕಲ್ಪಿಸಲು ಹೈಕಮಾಂಡ್ ಎರಡು ವರ್ಷ ಅವಧಿಯ ಸೂತ್ರ ಮಾಡಿದೆ. ಹೈಕಮಾಂಡ್ ನೀಡಿದ ಸೂತ್ರವನ್ನು ಜಾರಿಗೆ ತಂದಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ನೀಡಿರುವುದನ್ನು ನಾವು ಜಾರಿಗೆ ತಂದಿದ್ದೇವೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನದ್ದೇನೂ ಇಲ್ಲ ಎಂದು ಸ್ಪಷ್ಟಪಡಿಸುತ್ತಾರೆ.

ನಿಗಮ ಮಂಡಳಿ ಅಧಿಕಾರಾವಧಿಯನ್ನು ಎರಡು ವರ್ಷಕ್ಕೆ ಮಾತ್ರ ನೀಡಿರುವುದಕ್ಕೆ ಕೆಲವರು ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಪಕ್ಷಕ್ಕಾಗಿ ಶಾಸಕರು, ಕಾರ್ಯಕರ್ತರು ದುಡಿದಿದ್ದಾರೆ. ಹೀಗಾಗಿ ನಿಗಮ ಮಂಡಳಿಗಳಲ್ಲಿ ಶಾಸಕರೊಂದಿಗೆ ಕಾರ್ಯಕರ್ತರಿಗೂ ಅವಕಾಶ ನೀಡುತ್ತಿದ್ದು, ಇನ್ನೂ ಹೆಚ್ಚಿನವರಿಗೆ ಅವಕಾಶ ಸಿಗಬೇಕು. ಇತರರಿಗೆ ಅಧಿಕಾರ ಹಂಚಬೇಕು ಎನ್ನುವ ಕಾರಣಕ್ಕೆ ಎರಡು ವರ್ಷ ಮಾತ್ರ ಅಧಿಕಾರ ಅವಧಿ ಎಂದು ಹೇಳಲಾಗಿದ್ದು, ಹೈಕಮಾಂಡ್ ಸೂತ್ರವನ್ನು ನಾವು ಪಾಲಿಸಿದ್ದೇವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read