ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಅನಾರೋಗ್ಯದ ಕಾರಣ ಲೀಲಾವತಿ ಕಾರ್ ನಿಂದ ಇಳಿಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ ಗೃಹ ಕಚೇರಿಯಿಂದ ಲೀಲಾವತಿಯವರು ಇದ್ದ ಸ್ಥಳಕ್ಕೆ ಆಗಮಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಹಾಗೂ ಪುತ್ರ ವಿನೋದ್ ರಾಜ್ ಅವರು ತಮ್ಮ ಸ್ವಂತ ಹಣದಲ್ಲಿ ನೆಲಮಂಗಲದ ಸೋಲದೇವನಹಳ್ಳಿ ಬಳಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನಿಸಿದರು. ಅವರಿಗೆ ಸರ್ಕಾರದಿಂದ ಸಲ್ಲಬೇಕಾದ ಸೂಕ್ತ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದೆ. ಲೀಲಾವತಿಯವರ ಆರೋಗ್ಯ ಬೇಗನೇ ಸುಧಾರಿಸಲಿ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಹಾಗೂ ಪುತ್ರ ವಿನೋದ್ ರಾಜ್ ಅವರು ತಮ್ಮ ಸ್ವಂತ ಹಣದಲ್ಲಿ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಆಗಮಿಸುವಂತೆ ನನ್ನನ್ನು ಇಂದು ಗೃಹ ಕಚೇರಿಯಲ್ಲಿ ಭೇಟಿಯಾಗಿ ಆಹ್ವಾನಿಸಿದರು. ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಸೂಕ್ತ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದೆ. pic.twitter.com/Mi1HontxRl
— DK Shivakumar (@DKShivakumar) October 14, 2023