HomeKarnatakaBIG NEWS: ‘ಉದ್ಯೋಗ ಸೃಷ್ಟಿ ಉದ್ದೇಶದಿಂದ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಸರ್ಕಾರ ಚಿಂತನೆ’

BIG NEWS: ‘ಉದ್ಯೋಗ ಸೃಷ್ಟಿ ಉದ್ದೇಶದಿಂದ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಸರ್ಕಾರ ಚಿಂತನೆ’

ರಾಮನಗರ: ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಕೂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯುತ್ತಿಲ್ಲ. ಚರ್ಚೆ ನಡೆಸಿ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯುತ್ತೇವೆ. 30 ವರ್ಷಗಳಿಂದ ಹೊಸ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಅಂಗಡಿಯವರು 4-5 ಕೋಟಿ ರೂಪಾಯಿಗೆ ಪರವಾನಿಗೆ ಮಾರಾಟ ಮಾಡುತ್ತಿದ್ದಾರೆ. ಉದ್ಯೋಗ ಸೃಷ್ಟಿ ಉದ್ದೇಶದಿಂದ ಹೊಸ ಮದ್ಯದಂಗಡಿ ತೆರೆಯಲು ಉದ್ದೇಶಿಸಲಾಗಿದೆ. ಈ ಬಗ್ಗೆ ಎಲ್ಲರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದ ಅವರು, ಮದ್ಯ ಸೇವನೆ ನಿಲ್ಲಿಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular