HomeKarnatakaBIG NEWS: ಕಿಚ್ಚ ಸುದೀಪ್ ಭೇಟಿಯಾದ ಡಿ.ಕೆ.ಶಿವಕುಮಾರ್; ಕುತೂಹಲ ಮೂಡಿಸಿದ ಚರ್ಚೆ

BIG NEWS: ಕಿಚ್ಚ ಸುದೀಪ್ ಭೇಟಿಯಾದ ಡಿ.ಕೆ.ಶಿವಕುಮಾರ್; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ರಾಜ್ಯ ಕಾಂಗ್ರೆಸ್ ಮತದಾರರನ್ನು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿದೆ. ಇದರ ಮುಂದುವರೆದ ಭಾಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಟ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಸಾಧ್ಯತೆ ಬಗ್ಗೆ ವದಂತಿಗಳು ಹಬ್ಬಿರುವ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹಾಗೂ ಸುದೀಪ್ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ರಾತ್ರಿ ಡಿ.ಕೆ.ಶಿವಕುಮಾರ್, ನಟ ಸುದೀಪ್ ಅವರನ್ನು ಭೇಟಿಯಾಗಿ ಇಬ್ಬರೂ ಒಟ್ಟಿಗೆ ಭೋಜನ ಮಾಡಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್, ಪಕ್ಷದ ಚುನಾವಣಾ ಪ್ರಚಾರದ ಸಭೆಯಲ್ಲಿ ಭಾಗಿಯಾಗಿ ಪಕ್ಷಕ್ಕೆ ಬೆಂಬಲ ನೀಡುವಂತೆ ಆಹ್ವಾನ ನೀಡಿದ್ದಾರೆ. ಸ್ಟಾರ್ ಪ್ರಚಾರಕರಿಗೆ ಆಹ್ವಾನ ನೀಡುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಸುದೀಪ್ ಅವರನ್ನು ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಸುದೀಪ್ ಭಾಗಿಯಾಗಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular