HomeKarnatakaಮಾ. 10ರಂದು ಡಿಕೆಶಿ ಡಿನ್ನರ್ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ!

ಮಾ. 10ರಂದು ಡಿಕೆಶಿ ಡಿನ್ನರ್ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ!

ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಪಾರ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಹ ಆಹ್ವಾನ ನೀಡಲಾಗುತ್ತದೆ.

ಮಾರ್ಚ್‌ 6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಲಿದ್ದಾರೆ. ಆದ್ದರಿಂದ ಮಾರ್ಚ್ 10ರಂದು ಬೆಂಗಳೂರಿನಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಲಾಗಿದೆ.

ಮಾರ್ಚ್ 6ರಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026 ಮಂಡಿಸಲಿದ್ದಾರೆ. ಆದ್ದರಿಂದ ಮಾರ್ಚ್ 10ರಂದು ಡಿ.ಕೆ.ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರು, ಎಂಎಲ್‌ಸಿಗಳಿಗೆ ಡಿನ್ನರ್ ಪಾರ್ಟಿಗೆ ಆಹ್ವಾನ ನೀಡಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳು ಪೂರ್ಣಗೊಂಡಿವೆ. ಅಲ್ಲದೇ ಪಕ್ಷವನ್ನು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರಕ್ಕೆ ತಂದಿದ್ದಾರೆ. ಆದ್ದರಿಂದ ಭರ್ಜರಿಯಾಗಿ ಔತಣ ಕೂಟವನ್ನು ಆಯೋಜನೆ ಮಾಡಲಾಗುತ್ತದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ನಾಯಕತ್ವ ಬದಲಾವಣೆ ಚರ್ಚೆಯ ನಡೆಯವೆಯೇ ಡಿ.ಕೆ.ಶಿವಕುಮಾರ್ ಈ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದು, ದೆಹಲಿಯ ಯಾತ್ರೆ ಸಹ ಕೈಗೊಂಡಿದ್ದರು.

2023ರ ವಿಧಾನಸಭೆ ಚುನಾವಣೆ ಬಳಿಕ ಲೋಕಸಭೆ ಚುನಾವಣೆ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಹೈಕಮಾಂಡ್ ನಾಯಕರು ಡಿ.ಕೆ.ಶಿವಕುಮಾರ್‌ಗೆ ಸೂಚಿಸಿದ್ದರು. ಆದರೆ ಲೋಕಸಭೆ ಚುನಾವಣೆ ಮುಗಿದ ಬಳಿಕವೂ ಅವರನ್ನು ಬದಲಾವಣೆ ಮಾಡಿಲ್ಲ.

ನಾಯಕತ್ವ ಬದಲಾವಣೆಗೆ ಡಿ.ಕೆ.ಶಿವಕುಮಾರ್ ಬಣ ಪಟ್ಟು ಹಿಡಿದ ಕೂಡಲೇ ಸಿಎಂ ಸಿದ್ದರಾಮಯ್ಯ ಬಣ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ವಾದ ಮುಂದಿಡುತ್ತಿದೆ. ಆದ್ದರಿಂದ ಹೈಕಮಾಂಡ್ ನಾಯಕರು ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ.

ಸದ್ಯದ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಹಸಕ್ಕೆ ಕೈ ಹಾಕುವ ಸಾಧ್ಯತೆ ಕಡಿಮೆ ಇದೆ. 5 ರಾಜ್ಯಗಳ ವಿಧಾನಸಭೆ ಚುನಾವಣೆ, ಕರ್ನಾಟಕದಲ್ಲಿ ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಗಿಯುವ ತನಕ ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುವ ನಿರೀಕ್ಷೆ ಇದೆ.

ಆದ್ದರಿಂದ ಡಿ.ಕೆ.ಶಿವಕುಮಾರ್ ಭರ್ಜರಿಯಾಗಿ ಔತಣಕೂಟ ಆಯೋಜನೆ ಮಾಡುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬಜೆಟ್ ಅಧಿವೇಶನದ ಸಮಯವಾದ ಕಾರಣ ಎಲ್ಲಾ ಶಾಸಕರು, ಎಂಎಲ್‌ಸಿಗಳು ಬೆಂಗಳೂರು ನಗರದಲ್ಲಿಯೇ ಇರಲಿದ್ದು, ಔತಣಕೂಟಕ್ಕೆ ಹಾಜರಾಗಲಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular