HomeKarnatakaಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಭೂಮಾಲೀಕರ ಪರವಾಗಿ ಅಭಿನಂದನೆ

ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಭೂಮಾಲೀಕರ ಪರವಾಗಿ ಅಭಿನಂದನೆ

“ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರ ಸಹಸ್ರ ದಿನಗಳು ಪೂರೈಸಿದ ಪ್ರಯುಕ್ತ ಹಾವೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು.

“ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸರ್ಕಾರದ 1000 ದಿನಗಳ ಸಾಧನೆ, ರಾಜ್ಯದಲ್ಲಿ ದೊಡ್ಡ ಬದಲಾವಣೆಯನ್ನು ತಂದಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ನುಡಿದಂತೆ ನಡೆದು ನಿಮ್ಮ ಆಶೀರ್ವಾದ ಪಡೆಯಲಿಕ್ಕೆ ಇಲ್ಲಿಗೆ ನಾವು ಬಂದಿದ್ದೇವೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಅಂತ ಹೇಳಿದ್ದೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದಿದ್ದಕ್ಕೆ 5 ಗ್ಯಾರಂಟಿಗಳ ಜೊತೆಗೆ ಇದೀಗ 6ನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿಯನ್ನು ನೀಡುತ್ತಿದ್ದೇವೆ” ಎಂದು ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದರು.

“ರಾಜ್ಯದಲ್ಲಿರುವ ಎಲ್ಲಾ ಭೂ ಮಾಲೀಕರಿಗೆ ನಮ್ಮ ಸರ್ಕಾರ ಪೋಡಿ, ಪಟ್ಟಾ ಹಾಗೂ ಆಸ್ತಿ ದಾಖಲೆಗಳನ್ನು ನೀಡಿದೆ. 5 ಗ್ಯಾರಂಟಿಗಳನ್ನು ಎಲ್ಲಾ ಪಕ್ಷದವರು ಕಾಪಿ ಮಾಡಿದ್ದಕ್ಕೆ, ಇದು ಈ ದೇಶದ ಗ್ಯಾರಂಟಿಯಾಗಿ ಉಳಿದಿದೆ” ಎಂದರು.

“ಗ್ಯಾರಂಟಿಗಳಿಗೆ ಸಾವಿಲ್ಲ, ಅಭಿವೃದ್ಧಿಗೂ ಸಾವಿಲ್ಲ. ಆದರೆ ಟೀಕೆಗಳಿಗೆ ಸಾವಿದೆ. ಆರೋಪಕ್ಕೆ ಸಾವಿದೆ. ಅಪಪ್ರಚಾರಕ್ಕೆ ಸಾವಿದೆ. ಕೃಷ್ಣಭೈರೇಗೌಡರು ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಜನರ ಋಣವನ್ನು ತೀರಿಸಬೇಕೆಂದು ನಿರ್ಧರಿಸಿದರು” ಎಂದು ಬಣ್ಣಿಸಿದರು.

“ದೇವರು ಕೊಟ್ಟ ಅವಕಾಶದಲ್ಲಿ ನಿಮಗೆ ಭೂಮಿ ಗ್ಯಾರಂಟಿ ಕೊಟ್ಟು ನಿಮ್ಮ ಬದುಕಿನಲ್ಲಿ ಹೊಸ ಧೈರ್ಯವನ್ನು ತುಂಬುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಜನರು ನೆಮ್ಮದಿಯಾಗಿ ಬದುಕುತ್ತಿದ್ದಾರೆ. ವಿಪಕ್ಷದವರು ಭಾವನೆಗಳ ಮೇಲೆ ರಾಜಕೀಯ ಮಾಡಿದರೆ, ನಾವು ಬದುಕಿನ ಮೇಲೆ ರಾಜಕೀಯ ಮಾಡುತ್ತಿದ್ದೇವೆ. ಜನರ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದೆ. ಗ್ಯಾರಂಟಿಗಳಿಗೂ ಸಾವಿಲ್ಲ, ಅಭಿವೃದ್ಧಿಗೂ ಸಾವಿಲ್ಲ” ಎಂದರು.

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ, “ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ.‌ ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ ಆಗಿದೆ” ಎಂದು ಹೇಳಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular