ಚುನಾವಣೆಗೆ ಹಣ ಸಂಗ್ರಹಿಸಿಟ್ಟ ಶಂಕೆ: ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಉದ್ಯಮಿ ಕೆಂಪರಾಜ್ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾರರಿಗೆ ಹಂಚಲು ಕೆಂಪರಾಜ್ ಮನೆಯಲ್ಲಿ ಹಣ ಸಂಗ್ರಹಿಸಿ ಇಡಲಾಗಿದೆ ಎಂಬ ಅನುಮಾನದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಕನಕಪುರ ರಸ್ತೆಯ ತಲಘಟ್ಟಪುರ ಸಮೀಪದ ವಾಜರಹಳ್ಳಿಯಲ್ಲಿರುವ ಕೆಂಪರಾಜ್ ಅವರ ಮನೆ ಮೇಲೆ ಎರಡು ಖಾಸಗಿ ಕಾರ್ ಗಳಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಕೆಂಪರಾಜ್ ಮತ್ತು ಅವರ ಕುಟುಂಬ ಸದಸ್ಯರ ಹಣಕಾಸು ವ್ಯವಹಾರ, ತೆರಿಗೆ ಪಾವತಿ, ಆಸ್ತಿ, ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳ ಪರಿಶೀಲನೆ ನಡೆಸಿ ಆದಾಯ ಮೂಲದ ಬಗ್ಗೆ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಹೆಚ್ಚಿನ ಪರಿಶೀಲನೆಗಾಗಿ ಕೆಲವು ಮಹತ್ವದ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ, ಗ್ರಾನೈಟ್, ಕ್ರಷರ್ ಸೇರಿದಂತೆ ಹಲವು ಉದ್ಯಮ ಹೊಂದಿರುವ ಕೆಂಪರಾಜು ಡಿಕೆ ಸಹೋದರರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read