HomeKarnatakaಜು. 5ರ ಬದಲು 8ರಂದು ದೆಹಲಿಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ: ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ...

ಜು. 5ರ ಬದಲು 8ರಂದು ದೆಹಲಿಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ: ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿದೇಶ ಪ್ರವಾಸ ವಿಸ್ತರಣೆಯಾಗಿದ್ದು, ಜುಲೈ 5ರ ಬದಲು ಜುಲೈ 9ರಂದು ದೆಹಲಿಗೆ ವಾಪಸಾಗಲಿದ್ದಾರೆ. ಹೀಗಾಗಿ ಜುಲೈ 5ರಂದು ನಿಗದಿಯಾಗಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಕಾರ್ಯಕಾರಿ ಮಂಡಳಿ ಸದಸ್ಯ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮೂರು ದಿನ ಮುಂದೂಡಿಕೆಯಾಗಿದೆ.

ಈ ಮೊದಲು ಜುಲೈ 5ರಂದು ರಾಹುಲ್ ಗಾಂಧಿ ವಿದೇಶದಿಂದ ಆಗಮಿಸಲಿದ್ದಾರೆ ಎನ್ನಲಾಗಿತ್ತು. ಅವರ ವಿದೇಶ ಪ್ರವಾಸ ಮೂರು ದಿನ ವಿಸ್ತರಣೆಯಾಗಿದೆ. ಹೀಗಾಗಿ ಜುಲೈ 8ರಂದು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜಿಲ್ಲಾವಾರು, ಸಮುದಾಯವಾರು ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಜುಲೈ 9 ಅಥವಾ 10 ರಂದು ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮಹತ್ವದ ಚರ್ಚೆ ನಡೆಯಲಿದ್ದು ಆಷಾಢಕ್ಕೆ ಮೊದಲು ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 9 ಅಥವಾ 10ರಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ. ಆಷಾಢಕ್ಕೆ ಮೊದಲು ಜುಲೈ 14ರ ವೇಳೆಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ ಅವಧಿ ಪೂರ್ಣಗೊಳ್ಳಲಿರುವ ವಿಧಾನಪರಿಷತ್ ನ 5 ನಾಮನಿರ್ದೇಶಿತ ಸದಸ್ಯ ಸ್ಥಾನಗಳಿಗೆ ಯಾರನ್ನು ನಾಮ ನಿರ್ದೇಶನ ಮಾಡಬೇಕು ಎನ್ನುವ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular