HomeKarnataka30 ತಿಂಗಳ ನಂತರ ಡಿಕೆಶಿ ಸಿಎಂ: ಸದ್ಯ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಕೆ: ಡಿಸಿಎಂ ಜತೆ 2...

30 ತಿಂಗಳ ನಂತರ ಡಿಕೆಶಿ ಸಿಎಂ: ಸದ್ಯ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಕೆ: ಡಿಸಿಎಂ ಜತೆ 2 ‘ಪ್ರಮುಖ’ ಖಾತೆ

ಕಾಂಗ್ರೆಸ್ ಹೈಕಮಾಂಡ್ ರಾಜಿಸಂಧಾನ ಸೂತ್ರ ಸಿದ್ಧಪಡಿಸಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಮತ್ತು ನಂತರದ 30 ತಿಂಗಳು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ.

ಮೇ 20ರಂದು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಆಡಳಿತದ ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ನಾಯಕರಿಗೆ ಆಹ್ವಾನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವಾರದ ನಂತರ ಸಚಿವರ ಪ್ರಮಾಣವಚನ ನಡೆಯಲಿದೆ. ಉಪಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುವುದು.

ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಗೆ ಕಾಂಗ್ರೆಸ್ ಚಿಂತನೆ ನಡೆಸಿದ್ದು, ಆದರೆ, ಡಿ.ಕೆ. ಶಿವಕುಮಾರ್ ಒಪ್ಪದ ಹಿನ್ನೆಲೆಯಲ್ಲಿ ಅವರೊಬ್ಬರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಮೂರು ಡಿಸಿಎಂ ಹುದ್ದೆ ಬೇಡ ಎಂದು ಡಿಕೆಶಿ ಹೇಳಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾತ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular