ಹೊಸಪೇಟೆ: ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡದ ನಟರು ಒಂದಾಗಬೇಕು. ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಒಗ್ಗಟ್ಟಾಗಬೇಕು ಎಂದು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಹೇಳಿದ್ದಾರೆ.
ಹಂಪಿ ಉತ್ಸವದ ನಿಮಿತ್ತ ಆಗಮಿಸಿದ್ದ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನೆಲ, ಜಲ, ಭಾಷೆ ವಿಚಾರದಲ್ಲಿ ಕಲಾವಿದರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದನ್ನು ಸಮರ್ಥಿಸಿಕೊಂಡರು. ಸಾಹೇಬ್ರು ಹೇಳುವುದರಲ್ಲಿ ತಪ್ಪೇನಿಲ್ಲ. ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು ಎಂದು ಹೇಳಿದ್ದಾರೆ.
ಡಾ. ರಾಜಕುಮಾರ್ ಅವರು ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ. ನಮ್ಮವರು ಎಲ್ಲರೂ ಒಂದಾಗಬೇಕು. ಅದನ್ನೇ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ನನ್ನ ಸಹಮತವಿದೆ. ಕಲಾವಿದರು ಒಗ್ಗಟ್ಟಾಗಬೇಕು. ಉತ್ತರ ಕರ್ನಾಟಕದ ನದಿ, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು ಎಂದು ರಮ್ಯಾ ಹೇಳಿದ್ದಾರೆ.