HomeKarnatakaBIG NEWS : ಲೋಕಭವನದ 'ಗ್ಲಾಸ್ ಹೌಸ್' ನಲ್ಲಿ 'CM' ಆಗಿ ಡಿಕೆ ಶಿವಕುಮಾರ್...

BIG NEWS : ಲೋಕಭವನದ ‘ಗ್ಲಾಸ್ ಹೌಸ್’ ನಲ್ಲಿ ‘CM’ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ , ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ರಾಜಕೀಯ ಬೆಳವಣಿಗೆ ನಡೆದಿದೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದೆ.

ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಸಂಭವಿಸಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 3, 2026ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅದನ್ನು ಅಂಗೀಕರಿಸಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ವಿಸರ್ಜನೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

·  ಪ್ರಮಾಣವಚನ ಸಮಾರಂಭ: ಜೂನ್ 3ರಂದು ಬೆಂಗಳೂರಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಸರಳ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ನೂತನ ಮುಖ್ಯಮಂತ್ರಿಯೊಂದಿಗೆ ಸುಮಾರು 8 ರಿಂದ 10 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಉಳಿದ ಸಚಿವರ ನೇಮಕಾತಿಯು ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ನಂತರ ನಡೆಯುವ ನಿರೀಕ್ಷೆಯಿದೆ.ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನದ ಮೇರೆಗೆ ಈ ನಾಯಕತ್ವ ಬದಲಾವಣೆ ನಡೆದಿದ್ದು, ಪಕ್ಷದ ಆಂತರಿಕ ವ್ಯವಸ್ಥೆಯ ಭಾಗವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರವಾಗಿದೆ.

ಪ್ರಸ್ತುತ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಗಳು ನಡೆಯುತ್ತಿದ್ದು, ಮುಂದಿನ ಸರ್ಕಾರದ ರೂಪುರೇಷೆಗಳ ಕುರಿತು ಚರ್ಚೆಗಳು ಮುಂದುವರಿದಿವೆ. ಪಕ್ಷದ ಹಿರಿಯ ನಾಯಕರು ಮತ್ತು ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದು, ಅಧಿಕೃತ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular