HomeLatest Newsಪರಮೇಶ್ವರ್ ಅಂಬೇಡ್ಕರ್ ಹೆಸರಿನಲ್ಲಿ, ಎಂಬಿ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ: ಮುಖ್ಯಮಂತ್ರಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ದು...

ಪರಮೇಶ್ವರ್ ಅಂಬೇಡ್ಕರ್ ಹೆಸರಿನಲ್ಲಿ, ಎಂಬಿ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ: ಮುಖ್ಯಮಂತ್ರಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ದು ಯಾರ ಹೆಸರಿನಲ್ಲಿ?

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕರ ಪಕ್ಷದ ನಾಯಕ ಡಿಕೆ ಶಿವಕುಮಾರ್ ಅವರು ಅಭಿಮಾನಿಗಳ ಹರ್ಷೋದ್ಗಾರ ಸಂಭ್ರಮದ ನಡುವೆ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿಗಳೊಂದಿಗೆ ಹಿರಿಯ ನಾಯಕ ಡಾ. ಜಿ ಪರಮೇಶ್ವರ್ ಮಾತ್ರ ಉಪಮುಖ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಸಂಪುಟಕ್ಕೆ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬುಧವಾರ ಬೆಂಗಳೂರಿನ ಲೋಕಭವನದಲ್ಲಿರುವ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರ ಗೌಪೇತೆ ಬೋಧಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಂಪುಟಕ್ಕೆ 13 ಮಂದಿ ಸಚಿವರು ಸೇರ್ಪಡೆಯಾಗಿದ್ದು ಇನ್ನೂ 20 ಸ್ಥಾನಗಳನ್ನು ಖಾಲಿ ಬಿಡಲಾಗಿದೆ. ಜೂನ್ 18ರಂದು ರಾಜ್ಯ ಸಭೆ ಮತ್ತು ವಿಧಾನಪರಿಷತ್ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಮಾಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ.

ಒಂದೇ ಹಂತದಲ್ಲಿ ಸಂಪುಟ ಪ್ರಕ್ರಿಯೆ ಮುಗಿಸಿದರೆ ಸಚಿವ ಸ್ಥಾನದ ವಂಚಿತರು ರಾಜ್ಯಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಡ್ಡ ಮತದಾನ ನಡೆಸಬಹುದೆಂಬ ಹಿನ್ನೆಲೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡಲಾಗಿದ್ದು 20 ಸ್ಥಾನಗಳನ್ನು ಉಳಿಸಿಕೊಳ್ಳಲಾಗಿದೆ.

ಡಿಕೆ ಶಿವಕುಮಾರ್ ಅವರು ತಾವು ಅತಿಯಾಗಿ ನಂಬುವ ನೊಣವಿನಕೆರೆ ಗಂಗಾಧರ ಅಜ್ಜ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ಎಂಬಿ ಪಾಟೀಲ್ ಅವರು ಬಸವಣ್ಣ ಮತ್ತು ಸಿದ್ದೇಶ್ವರ ಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಮೂವರು ಒಕ್ಕಲಿಗರು, ಮೂವರು ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದಿಂದ ಇಬ್ಬರು, ಪರಿಶಿಷ್ಟ ಪಂಗಡದಿಂದ ಒಬ್ಬರು, ಲಿಂಗಾಯಿತ ಸಮುದಾಯದಿಂದ ಮೂವರು, ಕ್ರಿಶ್ಚಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದಿಂದ ತಲಾ ಒಬ್ಬರಿಗೆ ಅವಕಾಶ ನೀಡಲಾಗಿದೆ.

ಸಂಪುಟದಲ್ಲಿ ಬೆಂಗಳೂರಿಗೆ 4 ಸ್ಥಾನ ಕಲ್ಬುರ್ಗಿಗೆ ಎರಡು ಸ್ಥಾನ ಉಳಿದಂತೆ ಬೆಂಗಳೂರು ಗ್ರಾಮಾಂತರ ತುಮಕೂರು ದಕ್ಷಿಣ ಕನ್ನಡ ಬೆಳಗಾವಿ ವಿಜಾಪುರ ಮತ್ತು ಬೀದರ್ ಗೆ ಒಂದು ಸ್ಥಾನಗಳನ್ನು ನೀಡಲಾಗಿದೆ.

ಚಾಮರಾಜನಗರ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಗದಗ ಧಾರವಾಡ ,ಬಳ್ಳಾರಿ, ರಾಯಚೂರು, ಕೊಪ್ಪಳ ಸೇರಿದಂತೆ ಬಹುತೇಕ ಜಿಲ್ಲೆಗಳು ಸ್ಥಾನ ವಂಚಿತವಾಗಿವೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸಂಪುಟದಲ್ಲಿ ಯಾವುದೇ ಮಹಿಳೆಯರಿಗೂ ಸ್ಥಾನ ನೀಡಿಲ್ಲ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular