HomeIndiaಕಾಮಾಕ್ಯ ದೇವಾಲಯಕ್ಕೆ ಪ್ರಿಯಾಂಕಾ ಗಾಂಧಿ ಜೊತೆ ಡಿಕೆಶಿ ಭೇಟಿ

ಕಾಮಾಕ್ಯ ದೇವಾಲಯಕ್ಕೆ ಪ್ರಿಯಾಂಕಾ ಗಾಂಧಿ ಜೊತೆ ಡಿಕೆಶಿ ಭೇಟಿ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸ್ಸಾಂ ಪ್ರವಾಸದಲ್ಲಿದ್ದಾರೆ. ಅವರು ಗುರುವಾರ ಅವರು ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಅಸ್ಸಾಂನ ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಭೇಟಿ ನೀಡಲಾಯಿತು ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ದೇವಿಯ ದಿವ್ಯಾನುಗ್ರಹ ಪಡೆದು ನಾಡಿನ ಸಮಸ್ತ ಜನರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಪ್ರಿಯಾಂಕಾ ಗಾಂಧಿ ಅವರು ಸಹ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ಸಾಂ ಚುನಾವಣೆ ತಯಾರಿ: 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಮಾರ್ಚ್/ ಏಪ್ರಿಲ್ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಡಿ.ಕೆ.ಶಿವಕುಮಾರ್ ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ.

ಪ್ರಿಯಾಂಕಾ ಗಾಂಧಿ ಅಸ್ಸಾಂ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥರು. ವಿಧಾನಸಭೆ ಚುನಾವಣೆಯ ತಯಾರಿ ಕುರಿತು ಸಭೆ ನಡೆಸಲು ಡಿ.ಕೆ.ಶಿವಕುಮಾರ್ ಅಸ್ಸಾಂಗೆ ತೆರಳಿದ್ದು, ಇಂದು ಪ್ರಿಯಾಂಕಾ ಗಾಂಧಿ ಸಹ ಅಲ್ಲಿಗೆ ಆಗಮಿಸಿದ್ದಾರೆ.

ಮಾರ್ಚ್‌ನಲ್ಲಿ ಚುನಾವಣಾ ಆಯೋಗ ಅಸ್ಸಾಂ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಹಿಮಂತ ಬಿಸ್ವಾ ಶರ್ಮಾ ಜನಪ್ರಿಯ ಮುಖ್ಯಮಂತ್ರಿ.

ಅಸ್ಸಾಂನಲ್ಲಿ 29 ಕಾಂಗ್ರೆಸ್ ಶಾಸಕರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಗೆಲ್ಲಬೇಕು ಎಂದು ಕಾಂಗ್ರೆಸ್ ಪಕ್ಷ ತಂತ್ರ ರೂಪಿಸುತ್ತಿದೆ. ಆದ್ದರಿಂದ ಟಾಸ್ಕ್ ಮಾಸ್ಟರ್ ಡಿ.ಕೆ.ಶಿವಕುಮಾರ್‌ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ ನಿಜವಾದ ಕಾಂಗ್ರೆಸ್ ಮತ್ತು ಹಳೆಯ ಕಾಂಗ್ರೆಸ್​ ನಡುವಿನ ಹೋರಾಟ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭೆ ವಿರೋಧ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಇದು ಅಸ್ಸಾಂನಲ್ಲಿ ಕಾಂಗ್ರೆಸ್‌ನ ಆಂತರಿಕ ಜಗಳವನ್ನು ಬಹಿರಂಗ ಮಾಡಿದೆ.

ಆದ್ದರಿಂದ ಇಂದು ಅಸ್ಸಾಂ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲಾಗಿದೆ. ಸಂಸತ್  ಸದಸ್ಯೆ ಮತ್ತು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜಕೀಯ ವ್ಯವಹಾರಗಳ ಸಮಿತಿ, ಚುನಾವಣಾ ಸಮಿತಿ ಮತ್ತು ವಿವಿಧ ಸಂಘಟನೆಗಳ ಸಭೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಆದ್ದರಿಂದ ಚುನಾವಣಾ ಉಸ್ತುವಾರಿ ಡಿ.ಕೆ.ಶಿವಕುಮಾರ್ ಸಹ ಅಸ್ಸಾಂಗೆ ತೆರಳಿದ್ದಾರೆ.

ಅಸ್ಸಾಂ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಾಂಗ್ರೆಸ್ ಸಮಿತಿಯ ನೇತೃತ್ವ ವಹಿಸಿರುವ ಪ್ರಿಯಾಂಕಾ ವಾದ್ರಾ ರಾಜ್ಯ ಕಾಂಗ್ರೆಸ್ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮತ್ತು ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಸಭೆಗಳನ್ನು ನಡೆಸಲಿದ್ದಾರೆ.

ಗೌರವ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೆಯೇ? ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ ಭೂಪೇನ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲು ಹೊರಟಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ಆತಂಕಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular