HomeKarnatakaಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿಕೆ ಬಣ ಮೇಲುಗೈ

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿಕೆ ಬಣ ಮೇಲುಗೈ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲುಗೈ ಸಾಧಿಸಿದೆ.

ಡಿಕೆಶಿ ಬಣದ ಕೆಂಚಪ್ಪಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಬಣಕ್ಕೆ ಮುಖಭಂಗವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಕುಮಾರಸ್ವಾಮಿಗೆ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಕೂಡ ಹಿನ್ನಡೆಯಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಬಣದ ಡಾ. ಅಂಜಿನಪ್ಪ ಅವರು ಪರಾಭವಗೊಂಡಿದ್ದಾರೆ.

ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಕೆಂಚಪ್ಪಗೌಡ 21 ಮತ ಪಡೆದುಕೊಂಡಿದ್ದು, ಡಾ. ಆಂಜಿನಪ್ಪ 14 ಮತ ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ್, ಡಾ.ರೇಣುಕಾ ಪ್ರಸಾದ್, ಪ್ರಧಾನ ಕಾರ್ಯದರ್ಶಿಯಾಗಿ ಕೋನಪ್ಪ ರೆಡ್ಡಿ, ಸಹ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ ಆರ್., ಖಜಾಂಚಿಯಾಗಿ ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular