HomeLatest NewsBIG NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್

BIG NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್ ಮಾತ್ರ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದು, ಹೊಸ ಸರ್ಕಾರ ರಚನೆ ವಿಚಾರವಾಗಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆಯೇ ಅತ್ತ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್‌ ನಡೆದಿದೆ. ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್‌, ರಣದೀಪ್ ಸಿಂಗ್ ಸುರ್ಜೇವಾಲ,ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಾರೆ.

ನಾಳೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ನೂತನ ಸಿಎಂ ಆಯ್ಕೆ, ನೂತನ ಸಚಿವರ ಆಯ್ಕೆ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಇದಕ್ಕೂ ಮುನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಾಳೆ ಮೇ 30ರಂದು ಸಂಜೆ ಸಿಎಲ್‌ಪಿ ಮೀಟಿಂಗ್ ಕರೆಯಲಾಗಿದೆ. ಸಿಎಲ್‌ಪಿ ಸಭೆಯಲ್ಲಿ ಸುರ್ಜೇವಾಲ, ವೇಣುಗೋಪಾಲ್ ಭಾಗಿಯಾಗುತ್ತಾರೆ. ಸಿಎಲ್‌ಪಿ ಮೀಟಿಂಗ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಳಿಕ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular