HomeKarnatakaBIG NEWS: ಫೆಬ್ರವರಿಯಿಂದ ಕ್ಯೂಆರ್ ಕೋಡ್ ಇರುವ ಏಕರೂಪದ ಡಿಎಲ್, RC ಸ್ಮಾರ್ಟ್ ಕಾರ್ಡ್ ವಿತರಣೆ

BIG NEWS: ಫೆಬ್ರವರಿಯಿಂದ ಕ್ಯೂಆರ್ ಕೋಡ್ ಇರುವ ಏಕರೂಪದ ಡಿಎಲ್, RC ಸ್ಮಾರ್ಟ್ ಕಾರ್ಡ್ ವಿತರಣೆ

ಫೆಬ್ರವರಿಯಿಂದ ರಾಜ್ಯದಲ್ಲಿ ಕ್ಯೂಆರ್ ಕೋಡ್ ಇರುವ ಏಕರೂಪದ ಡಿಎಲ್, ಆರ್.ಸಿ. ಸ್ಮಾರ್ಟ್ ಕಾರ್ಡ್ ಸೌಲಭ್ಯ ಸಿಗಲಿದೆ.

ಹೊಸ ಚಾಲನಾ ಪರವಾನಿಗೆ, ವಾಹನ ನೋಂದಣಿ ಪ್ರಮಾಣ ಪತ್ರ ಪಡೆಯುವವರಿಗೆ ಏಕರೂಪದ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಹಳೆ ಡಿಎಲ್ ಗಳನ್ನು ನವೀಕರಣದ ವೇಳೆ ಬದಲಾಯಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಮಾರ್ಟ್ ಕಾರ್ಡ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಡಿಎಲ್ ಹೊಂದಿರುವ ಪೂರ್ಣ ಮಾಹಿತಿ ಸಿಗಲಿದೆ. ಸಂಚಾರದ ಅವಧಿಯಲ್ಲಿ ಪೊಲೀಸರು ಅಥವಾ ಸಾರಿಗೆ ಇಲಾಖೆ ಸಿಬ್ಬಂದಿ ಸುಲಭವಾಗಿ ತಪಾಸಣೆ ಮಾಡಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular