BIG NEWS: 6 ವರ್ಷದ ಬಾಲಕಿ ಮೇಲೆ ಸ್ಕೂಲ್ ಬಸ್ ನಲ್ಲಿ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದೆ. 6 ವರ್ಷದ ಬಾಲಕಿ ಮೇಲೆ ಸ್ಕೂಲ್ ಬಸ್ ನಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ಲೈಂಗಿಕ ದೌಜನ್ಯವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಖಾಸಗಿ ಶಾಲಾ ಬಾಲಕಿ ಮೇಲೆ ಬಸ್ ನಲ್ಲಿ ವಿದ್ಯಾರ್ಥಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಪ್ರಕರಣದ ಬಗ್ಗೆ ಕೈಗೊಂಡ ಕ್ರಮಗಳೇನು? ಮಾಹಿತಿ ನೀಡುವಂತೆ ದೆಹಲಿ ಮಹಿಳಾ ಆಯೋಗ ದೆಹಲಿ ರೋಹಿಣಿ ಉಪನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದೆ.

ಬಾಲಕಿಯ ತಂದೆ ತನ್ನ ಮಗಳ ಮೇಲೆ ಶಾಲಾ ಬಸ್ ನಲ್ಲಿ ದೌರ್ಜನ್ಯ ನಡೆಸಲಾಗಿದೆ ಎಂದು ದೂರು ನೀಡಿದ್ದರು. ಪ್ರಕರಣದಲ್ಲಿ ಆರೋಪಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಬೇಗಂಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354 ಮತ್ತು 228A ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read