HomeIndiaBig Update: ಮೈತ್ರಿಕೂಟ ಸೇರಿದ ಡಿಎಂಡಿಕೆಗೆ ಬಂಪರ್ ಗಿಫ್ಟ್‌ ಕೊಟ್ಟ ಡಿಎಂಕೆ!

Big Update: ಮೈತ್ರಿಕೂಟ ಸೇರಿದ ಡಿಎಂಡಿಕೆಗೆ ಬಂಪರ್ ಗಿಫ್ಟ್‌ ಕೊಟ್ಟ ಡಿಎಂಕೆ!

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಕಾವು ಏರಿದೆ. ದ್ರಾವಿಡ ಮುನ್ನೇಟ್ರಾ ಕಳಗಂ (ಡಿಎಂಕೆ) ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ) ಸೇರಿದ ಡಿಎಂಡಿಕೆ ಪಕ್ಷಕ್ಕೆ ಡಿಎಂಕೆ ಬಂಪರ್ ಗಿಫ್ಟ್ ನೀಡಿದೆ.

ಕೆಲವು ದಿನಗಳ ಹಿಂದೆ ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಡಿಎಂಕೆ ಅಧ್ಯಕ್ಷರೂ ಆಗಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭೇಟಿ ಮಾಡಿ, ಎಸ್‌ಪಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದ್ದರು.

ಈಗ ಡಿಎಂಕೆ ಪಕ್ಷ ಒಂದು ರಾಜ್ಯಸಭೆ ಸೀಟನ್ನು ಡಿಎಂಡಿಕೆ ಪಕ್ಷಕ್ಕೆ ನೀಡಿದೆ. ಎಂ.ಕೆ.ಸ್ಟಾಲಿನ್ ಮತ್ತು ಸುಧೀಶ್ ಅವರು ಸಹಿ ಹಾಕಿದ ಸೀಟು ಹಂಚಿಕೆ ಒಪ್ಪಂದದಲ್ಲಿ ಈ ಕುರಿತು ತಿಳಿಸಲಾಗಿದ್ದು, ಪಕ್ಷಕ್ಕೆ ಎಷ್ಟು ವಿಧಾನಸಭಾ ಕ್ಷೇತ್ರಗಳನ್ನು ಹಂಚಿಕೆ ಮಾಡಬೇಕು ಎಂಬುದನ್ನು ಸೀಟು ಹಂಚಿಕೆ ಸಮಿತಿಯು ನಿರ್ಧರಿಸುತ್ತದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಎಂಡಿಕೆ ಪಕ್ಷದ ಕುರಿತು: ನಟ, ರಾಜಕಾರಣಿ ದಿ. ವಿಜಯಕಾಂತ್ ಸೆಪ್ಟೆಂಬರ್ 14, 2005ರಂದು ಸ್ಥಾಪಿಸಿದ ಪ್ರಾದೇಶಿಕ ರಾಜಕೀಯ ಪಕ್ಷ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಡಿಎಂಡಿಕೆ).

ಈ ಪಕ್ಷವು 2011 ರಿಂದ 2016 ರವರೆಗೆ ರಾಜ್ಯ ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿತ್ತು. ಪ್ರಸ್ತುತ ಅವರ ಪತ್ನಿ ಪ್ರೇಮಲತಾ ವಿಜಯಕಾಂತ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಹಾಲಿ ಪಕ್ಷದ ಯಾವುದೇ ಶಾಸಕರು ಇಲ್ಲ. ಆದರೆ ಪಕ್ಷ ಮೊದಲ ಬಾರಿಗೆ ರಾಜ್ಯಸಭೆಯ ಸೀಟು ಪಡೆದಿದೆ. ತಮಿಳುನಾಡು ವಿಧಾನಸಭೆ ಚುನಾವಣೆ 2026 ಗಮನದಲ್ಲಿಟ್ಟುಕೊಂಡು ಡಿಎಂಡಿಕೆ ಪಕ್ಷ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಮಾರ್ಚ್ 10ರ ಬಳಿಕ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ರಾಜ್ಯದ ಹಾಲಿ ಆಡಳಿತ ಪಕ್ಷ ಡಿಎಂಕೆ. ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ. ದ್ರಾವಿಡ ಮುನ್ನೇಟ್ರಾ ಕಳಗಂ (ಡಿಎಂಕೆ) ಹೊರತುಪಡಿಸಿ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (CPI-M) ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ಮತ್ತು ವಿಡುದಲೈ ಚಿರುತ್ತೈಗಳ್ ಕಚ್ಚಿ (VCK) ಪಕ್ಷಗಳಿವೆ.

ಡಿಎಂಕೆ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ 27 ವಿಧಾನಸಭಾ ಕ್ಷೇತ್ರ ಮತ್ತು 1 ರಾಜ್ಯಸಭೆ ಸೀಟು ನೀಡುವುದಾಗಿ ಭರವಸೆ ನೀಡಿದೆ. ಡಿಎಂಡಿಕೆ ಪಕ್ಷಕ್ಕೆ ಎಷ್ಟು ಸೀಟು ಸಿಗಲಿದೆ? ಎಂಬುದು ಇನ್ನು ಅಂತಿಮವಾಗಿಲ್ಲ.

ನಟ ವಿಜಯ್ ಕಾರಣಕ್ಕೆ ಈ ಬಾರಿ ತಮಿಳುನಾಡು ಚುನಾವಣೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ವಿಜಯ್ ಟಿವಿಕೆ ಪಕ್ಷ ಸ್ಥಾಪನೆ ಮಾಡುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ದಿ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದು, ಎನ್‌ಡಿಎ ಮೈತ್ರಿಕೂಟದಲ್ಲಿದೆ. ರಾಜ್ಯದ ಆಡಳಿತ ಪಕ್ಷ ಡಿಎಂಕೆಗೆ ಎಐಎಡಿಎಂಕೆ, ಬಿಜೆಪಿ, ಟಿವಿಕೆ ಪಕ್ಷಗಳು ಪ್ರಮುಖ ಎದುರಾಳಿಗಳು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular