HomeIndiaರಾಹುಲ್ ಬೇಡಿಕೆ ತಳ್ಳಿ ಹಾಕಿದ ಡಿಎಂಕೆ: ತಮಿಳುನಾಡಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಅತಂತ್ರ!

ರಾಹುಲ್ ಬೇಡಿಕೆ ತಳ್ಳಿ ಹಾಕಿದ ಡಿಎಂಕೆ: ತಮಿಳುನಾಡಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಅತಂತ್ರ!

ತಮಿಳುನಾಡು ವಿಧಾನಸಭೆ ಚುನಾವಣೆ 2026ರ ತಯಾರಿ ನಡೆಯುತ್ತಿದೆ. 234 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟ. ಮುಖ್ಯಮಂತ್ರಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್.

ಆದರೆ 2026ರ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುಂದುವರೆಯುವ ಕುರಿತು ಅತಂತ್ರ ಪರಿಸ್ಥಿತಿ ಇದೆ. ಕಳೆದ ಎರಡು ದಶಕದಿಂದ ಡಿಎಂಕೆಗೆ ಕಾಂಗ್ರೆಸ್​ ಬೆಂಬಲ ನೀಡುತ್ತಿದೆ. ಆದರೆ ಈ ಬಾರಿ ಕಾಂಗ್ರೆಸ್ ಬೇಡಿಕೆಗೆ ಡಿಎಂಕೆ ಒಪ್ಪಿಗೆ ನೀಡುತ್ತಿಲ್ಲ.

ದೆಹಲಿಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯನ್ನು ಡಿಎಂಕೆ ಸಂಸದೆ ಕನ್ನಿಮೋಳಿ ಭೇಟಿಯಾಗಿದ್ದರು. ಈ ವೇಳೆ 2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮೈತ್ರಿ ಮುಂದುವರೆಸುವ ಕುರಿತು ಮಾತುಕತೆಗಳು ನಡೆದಿವೆ. ರಾಹುಲ್ ಗಾಂಧಿ ಅಧಿಕಾರ ಹಂಚಿಕೆ ಸೂತ್ರವನ್ನು ಮುಂದಿಟ್ಟಿದ್ದಾರೆ. ಆದರೆ ಡಿಎಂಕೆ ಇದನ್ನು ತಳ್ಳಿ ಹಾಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರ ಹಂಚಿಕೆ ಸೂತ್ರ, ಸೀಟುಗಳ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್, ಡಿಎಂಕೆ ಒಮ್ಮತ ಮೂಡಿದರೆ ಮಾತ್ರ ಮೈತ್ರಿ ಮುಂದುವರೆಯಲಿದೆ. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷ ನಟ ವಿಜಯ್ ನೇತೃತ್ವದ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದೆ.

ಮೈತ್ರಿಕೂಟ ಅತಂತ್ರ: ತಮಿಳುನಾಡು ರಾಜ್ಯದಲ್ಲಿ ಡಿಎಂಕೆ, ಎಐಎಡಿಎಂಕೆ ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ಅಧಿಕಾರ ಹಂಚಿಕೆ ಸೂತ್ರ ಮುಂದಿಟ್ಟಿದೆ. ಇದಕ್ಕೆ ಡಿಎಂಕೆ ಒಪ್ಪಿಗೆ ನೀಡುತ್ತಿಲ್ಲ. ಆದ್ದರಿಂದ ಮೈತ್ರಿಕೂಟ ಅತಂತ್ರವಾಗಿದೆ.

ರಾಹುಲ್ ಗಾಂಧಿ ಕನ್ನಿಮೋಳಿ  ಭೇಟಿ ವೇಳೆ ಯಾವುದೇ ಸೀಟು ಹಂಚಿಕೆ ಕುರಿತು ಒಪ್ಪಂದವಾಗಿಲ್ಲ. ಅಧಿಕಾರ ಹಂಚಿಕೆ ಸೂತ್ರವನ್ನು ಡಿಎಂಕೆ ತಳ್ಳಿ ಹಾಕಿದ್ದು, ಈ ಕುರಿತು ಮಾತುಕತೆಗಳು ಬೇಡ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಅಧಿಕಾರ ಹಂಚಿಕೆಯ ಸೂತ್ರಕ್ಕಾಗಿ ಬೇಡಿಕೆ ಇಟ್ಟಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 25 ಸೀಟುಗಳನ್ನು ನೀಡಲಾಗಿತ್ತು. ಆದರೆ ಈ ಬಾರಿ ಹೆಚ್ಚಿನ ಸೀಟುಗಳನ್ನು ನೀಡಲು ಡಿಎಂಕೆ ಒಪ್ಪಿದೆ. ಆದರೆ 51 ಸೀಟುಗಳು ಬೇಕು ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಇನ್ನೂ ಸಹ ಡಿಎಂಕೆ ಒಪ್ಪಿಲ್ಲ.

ಪಕ್ಷದ ಮಾಹಿತಿಗಳ ಪ್ರಕಾರ ರಾಹುಲ್ ಗಾಂಧಿ ಸೀಟುಗಳ ಸಂಖ್ಯೆ ಹೆಚ್ಚಳದ ಕುರಿತು ಬೇಡಿಕೆ ಇಟ್ಟಿಲ್ಲ. ಆದರೆ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಬೇಕು ಎಂಬುದು ಅವರ ಬೇಡಿಕೆಯಾಗಿದೆ. ಇದಕ್ಕೆ ಕನ್ನಿಮೋಳಿ ಒಪ್ಪಿಗೆ ಕೊಟ್ಟಿಲ್ಲ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದ್ದರಿಂದ ಕಾಂಗ್ರೆಸ್-ಡಿಎಂಕೆ ಮೈತ್ರಿ ಮುಂದುವರೆಯುವ ಸಾಧ್ಯತೆ ಇದೆ. ಸ್ಟಾಲಿನ್ ಅವರೇ ಒಮ್ಮೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆ ಇದೆ.

ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಉದಯ ಡಿಎಂಕೆ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಯುವ ಸಮುದಾಯದ ಮತಗಳು ಟಿವಿಕೆ ಪಕ್ಷಕ್ಕೆ ಹೋಗುವುದನ್ನು ತಡೆಯಬೇಕು ಎಂಬುದು ಡಿಎಂಕೆ ತಂತ್ರವಾಗಿದೆ. ಆದ್ದರಿಂದ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ಕಡಿದುಕೊಂಡು ಏಕಾಂಗಿಯಾಗಿ ಚುನಾವಣೆ ಎದುರಿಸುವ ಸಾಧ್ಯತೆ ಕಡಿಮೆ ಇದೆ.

ರಾಜ್ಯಸಭೆ ಸೀಟು ಹಂಚಿಕೆ, ವಿಧಾನಸಭೆ ಸೀಟು ಹಂಚಿಕೆ ಕುರಿತು ಕನ್ನಿಮೋಳಿ ಕಾಂಗ್ರೆಸ್ ನಾಯಕರ ಜೊತೆ ಇನ್ನೊಮ್ಮೆ ಮಾತುಕತೆ ನಡೆಸಲಿದ್ದಾರೆ. ಸೋನಿಯಾ ಗಾಂಧಿಯನ್ನು ಇನ್ನೂ ಸಹ ಕನ್ನಿಮೋಳಿ ಈ ವಿಚಾರದಲ್ಲಿ ಭೇಟಿ ಮಾಡಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular