HomeKarnatakaಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ದಾವಣಗೆರೆ: ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಹೂತಿದ್ದ ಶವವನ್ನು ಮಂಗಳವಾರ ಹೊರಗೆ ತೆಗೆದು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣನವರ ಸಮ್ಮುಖದಲ್ಲಿ ಸಂತೆಬೆನ್ನೂರು ಠಾಣೆ ಪೊಲೀಸರು ದಾವಣಗೆರೆ ಎಫ್ಎಸ್ಎಲ್ ತಜ್ಞರು, ಚಿಗಟೇರಿ ಆಸ್ಪತ್ರೆ ವೈದ್ಯರ ಸಮಕ್ಷಮದಲ್ಲಿ ಸೂಳೆಕೆರೆ ಸಮೀಪ ಹೂತಿದ್ದ ಶವ ಜೆಸಿಬಿ ಮೂಲಕ ಹೊರ ತೆಗೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 40 ವರ್ಷ ವಯಸ್ಸಿನ ಅನಾಮಧೇಯ ಪುರುಷನ ಶವ ಭದ್ರ ನಾಲೆ ಮೂಲಕ ಸೂಳೆಕೆರೆ ತಲುಪಿತ್ತು. ಕೊಳೆತ ಸ್ಥಿತಿಯಲ್ಲಿ ಗುರುತಿಸಲಾಗದರೀತಿಯಲ್ಲಿದ್ದ ಶವ ಹೂಳಲಾಗಿತ್ತು. ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಶವ ಹೊರತೆಗೆಯಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular