ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿನ್ನಬೇಡಿ…!

ಬೆಳಗ್ಗೆ ಉಪಹಾರಕ್ಕೆ ಅನೇಕರು ಹಣ್ಣುಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಹಣ್ಣುಗಳು ಆರೋಗ್ಯಕ್ಕೆ ಪ್ರಯೋಜನಕಾರಿ, ಆದರೆ ಕೆಲವು ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಬಾರದು. ಬೆಳಗಿನ ಉಪಹಾರದ ನಂತರ ಹಣ್ಣುಗಳನ್ನು ತಿನ್ನಬಹುದು.

ಬಾಳೆಹಣ್ಣು

ಬಾಳೆಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ ಮತ್ತು ತ್ವರಿತ ಶಕ್ತಿಯನ್ನು ನೀಡುತ್ತದೆ. ಆದರೆ ಬಾಳೆಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ರಕ್ತದಲ್ಲಿನ ಮೆಗ್ನೀಸಿಯಮ್ ಮಟ್ಟ ದಿಢೀರನೆ ಹೆಚ್ಚಳವಾಗುತ್ತದೆ. ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದ್ದರಿಂದ ಉಪಹಾರದ ನಂತರ ಅಥವಾ ಊಟದ ನಂತರ ಬಾಳೆಹಣ್ಣು ತಿನ್ನಬಹುದು. ಸಾಮಾನ್ಯವಾಗಿ ಇದನ್ನು ಹಾಲಿನೊಂದಿಗೆ ಬೆರೆಸಿ ತಿನ್ನಲಾಗುತ್ತದೆ.

ಸಿಟ್ರಸ್ ಹಣ್ಣುಗಳು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ, ದ್ರಾಕ್ಷಿ ಇತ್ಯಾದಿಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ. ಆದರೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ಸೇವಿಸುವುದರಿಂದ ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಸಿಟ್ರಸ್ ಹಣ್ಣುಗಳು ಹೊಟ್ಟೆಯಲ್ಲಿ ಆಮ್ಲದ ಮಟ್ಟವನ್ನು ಹೆಚ್ಚಿಸಬಹುದು. ಇದು ಆಸಿಡ್ ರಿಫ್ಲಕ್ಸ್ ಮತ್ತು ಎದೆಯುರಿ ಉಂಟುಮಾಡಬಹುದು.

ಮಾವು

ಮಾವಿನಹಣ್ಣುಗಳು ಸಿಹಿಯಾಗಿ ಮತ್ತು ರಸಭರಿತವಾಗಿರುವುದರಿಂದ ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುತ್ತವೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮಾವಿನಹಣ್ಣು ತಿನ್ನುವುದರಿಂದ ಅಸಿಡಿಟಿ ಉಂಟಾಗುತ್ತದೆ. ಮಾವು ಉಷ್ಣ ಸ್ವಭಾವವನ್ನು ಹೊಂದಿದೆ. ಖಾಲಿ ಹೊಟ್ಟೆಯಲ್ಲಿ ತಿಂದರೆ ಹೊಟ್ಟೆಯಲ್ಲಿ ಅಸ್ವಸ್ಥತೆ ಉಂಟಾಗುತ್ತದೆ.

ಲಿಚಿ

ಲಿಚಿಯ ರುಚಿ ಸಿಹಿಯಾಗಿರುತ್ತದೆ, ಆದರೆ ಖಾಲಿ ಹೊಟ್ಟೆಯಲ್ಲಿ ಲಿಚಿಯನ್ನು ತಿನ್ನಬಾರದು. ಲಿಚಿಯಲ್ಲಿ ಹೆಚ್ಚಿನ ಪ್ರಮಾಣದ ನೈಸರ್ಗಿಕ ಸಕ್ಕರೆ ಇರುತ್ತದೆ, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಇದ್ದಕ್ಕಿದ್ದಂತೆ ಹೆಚ್ಚಿಸುತ್ತದೆ. ಈ ಸ್ಥಿತಿಯು ಮಧುಮೇಹ ರೋಗಿಗಳಿಗೆ ವಿಶೇಷವಾಗಿ ಅಪಾಯಕಾರಿಯಾಗಿದೆ.

ಪಪ್ಪಾಯ

ಪಪ್ಪಾಯ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ, ಇದು  ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಆದರೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿನ್ನುವುದರಿಂದ ಹೊಟ್ಟೆ ಸೆಳೆತ ಮತ್ತು ಅತಿಸಾರದಂತಹ ಸಮಸ್ಯೆಗಳಾಗಬಹುದು. ಪಪ್ಪಾಯಿಯಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು  ಖಾಲಿ ಹೊಟ್ಟೆಯಲ್ಲಿ ತಿಂದರೆ ಹೊಟ್ಟೆನೋವು ಬರುತ್ತದೆ.

ಕಲ್ಲಂಗಡಿ

ಕಲ್ಲಂಗಡಿ ದೇಹವನ್ನು ಹೈಡ್ರೇಟ್‌ ಆಗಿಡುತ್ತದೆ. ಬೇಸಿಗೆಯಲ್ಲಿ ಇದು ದೇಹಕ್ಕೆ ತಂಪು ನೀಡುತ್ತದೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಕಲ್ಲಂಗಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನಂಶವಿರುವುದರಿಂದ ಇದು ಹೊಟ್ಟೆಯಲ್ಲಿ ಭಾರ ಮತ್ತು ಅಸ್ವಸ್ಥತೆಯನ್ನು ಉಂಟುಮಾಡುತ್ತದೆ.

ಅನಾನಸ್

ಅನಾನಸ್ ಬ್ರೊಮೆಲಿನ್ ಕಿಣ್ವವನ್ನು ಹೊಂದಿರುತ್ತದೆ, ಇದು ಜೀರ್ಣಕ್ರಿಯೆಗೆ ಸಹಕಾರಿ. ಆದರೆ ಅನಾನಸ್ ಅನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಇದು ಹೊಟ್ಟೆಯ ಕಿರಿಕಿರಿ ಮತ್ತು ವಾಂತಿಗೆ ಕಾರಣವಾಗಬಹುದು. ಅನಾನಸ್‌ ಕೂಡ ಸಿಟ್ರಸ್‌ ಅಂಶ ಹೊಂದಿರುವುದರಿಂದ ಅಸಿಡಿಟಿ ಉಂಟಾಗಬಹುದು.

ಬೆಳಗಿನ ಉಪಾಹಾರದ ಜೊತೆಗೆ ಅಥವಾ ನಂತರ ಹಣ್ಣುಗಳನ್ನು ತಿನ್ನುವುದು ಹೆಚ್ಚು ಪ್ರಯೋಜನಕಾರಿ. ಖಾಲಿ ಹೊಟ್ಟೆಯಲ್ಲಿ ಸೇಬು, ಪೇರಳೆ ಅಥವಾ ಎಳನೀರಿನ ಮಲಾಯಿಯನ್ನು ಸೇವಿಸಬಹುದು. ಯಾವುದೇ ಹಣ್ಣನ್ನು ಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read