HomeIndiaಲಾಠಿಗೆ ಹೆದರಬೇಡಿ: ನವೆಂಬರ್ 1 ರಂದು ನಡೆಯಲಿರುವ 'ಚಲೋ ದೆಹಲಿ ರಾಮಲೀಲಾ ಮಾರ್ಚ್'ನಲ್ಲಿ ಪಾಲ್ಗೊಳ್ಳುವಂತೆ ಜನರಿಗೆ...

ಲಾಠಿಗೆ ಹೆದರಬೇಡಿ: ನವೆಂಬರ್ 1 ರಂದು ನಡೆಯಲಿರುವ ‘ಚಲೋ ದೆಹಲಿ ರಾಮಲೀಲಾ ಮಾರ್ಚ್’ನಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ರಾಹುಲ್ ಗಾಂಧಿ ಕರೆ

ನವದೆಹಲಿ: ಲೋಕಸಭೆಯ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನವೆಂಬರ್ 1 ರಂದು ನವದೆಹಲಿಯಲ್ಲಿ ನಡೆಯಲಿರುವ ‘ಚಲೋ ದೆಹಲಿ ರಾಮಲೀಲಾ ಮಾರ್ಚ್’ನಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಭಾಗವಹಿಸುವಂತೆ ಕರೆ ನೀಡಿದ್ದಾರೆ.

ಈ ಬಗ್ಗೆ ಸಾಅಮಾಅಜಿಕ ಜಾಲತಾಣಗಳಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಪೊಲೀಸರು ಅಥವಾ ಅವರ ಲಾಠಿ ಏಟುಗಳಿಗೆ ಹೆದರುವ ಅಗತ್ಯವಿಲ್ಲ ಮತ್ತು ಯಾವುದೇ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳುವ ಧೈರ್ಯ ಬಿಜೆಪಿ ಸರ್ಕಾರಕ್ಕಿಲ್ಲ ಎಂದು ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದುಇರುವ ವ್ಯಾಪಕ ಅಕ್ರಮಗಳು ಮತ್ತು “ಮತಗಳ ಕಳ್ಳತನ” ಖಂಡಿಸಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಿಸಲು ಈ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಒಕ್ಕೂಟ ಈ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ.

ಯಾವುದೇ ರಾಜಕೀಯ ಸಿದ್ಧಾಂತಗಳನ್ನು ಬದಿಗಿಟ್ಟು, ದೇಶದ ಪ್ರಜಾಪ್ರಭುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿಯಾಗುತ್ತಿದೆ ಎಂದು ಅನಿಸುವ ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಹಾಗೂ ಯುವಜನರು ಇದರಲ್ಲಿ ಭಾಗಿಯಾಗಬೇಕು ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಇದು ಯಾವುದೇ ಒಂದು ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ, ಇದು ಭಾರತ ದೇಶದ ಆತ್ಮದ ಮೆರವಣಿಗೆಯಾಗಿದೆ” ಎಂದು ಅವರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜ್ಞಾನೇಶ್ ಕುಮಾರ್ ಅವರ ಧೋರಣೆಗಳಿಂದ ಬೇಸತ್ತಿರುವ ಪ್ರತಿಯೊಬ್ಬ ನಾಗರಿಕನೂ ಇದರಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.

ನಮ್ಮೊಂದಿಗೆ ಹೆಜ್ಜೆ ಹಾಕಿ

ಇದು ದೇಶಕ್ಕಾಗಿ ನಡೆಯುತ್ತಿರುವ ಏಕೈಕ ಪ್ರತಿಭಟನೆ ಎಂದು ಅವರು ಬಣ್ಣಿಸಿದರು. “ನಮ್ಮೊಂದಿಗೆ ಹೆಜ್ಜೆ ಹಾಕಿ – ಸಂವಿಧಾನವನ್ನು ಮತ್ತು ಭಾರತ ರಾಷ್ಟ್ರವನ್ನು ರಕ್ಷಿಸಲು ನಾವೆಲ್ಲರೂ ಒಟ್ಟಾಗಿ ನಡೆಯೋಣ.” ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದರು. “ಎಲ್ಲಾ ವಿದ್ಯಾರ್ಥಿ ಸಂಘಟನೆಗಳಿಗೆ ನಾನು ಮನವಿ ಮಾಡುತ್ತೇನೆ; ನಿಮ್ಮ ರಾಜಕೀಯ ಒಲವು ಏನೇ ಇರಲಿ, ಭಾರತದ ಮೇಲೆ ದಾಳಿ ನಡೆಯುತ್ತಿದೆ ಎಂದು ನಿಮಗೆ ಅನ್ನಿಸಿದರೆ, ಅಥವಾ ನಿಮ್ಮ ಅಭಿವ್ಯಕ್ತಿ, ನಿಮ್ಮ ಆಲೋಚನೆಗಳು ಮತ್ತು ನಿಮ್ಮ ಚಿಂತನಾ ಕ್ರಮದ ಮೇಲೆ ದಾಳಿ ನಡೆಯುತ್ತಿದೆ ಎಂದು ನಿಮಗೆ ಅನಿಸಿದರೆ, ದಯವಿಟ್ಟು ಬನ್ನಿ ಮತ್ತು ನಮ್ಮೊಂದಿಗೆ ಸೇರಿಕೊಳ್ಳಿ,” ಎಂದು ಅವರು ಬರೆದಿದ್ದಾರೆ. “ಇದು ಅತ್ಯುತ್ತಮವಾದ ಮಾರ್ಚ್ ಆಗಿರಲಿದೆ; ಇದು ಈ ದೇಶದ ಆತ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರನ್ನೂ ಅಲ್ಲಿ ನೋಡಲು ನಾನು ಎದುರು ನೋಡುತ್ತಿದ್ದೇನೆ.”

ದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ 1 ರಂದು ಈ ಬೃಹತ್ ರ‍್ಯಾಲಿ ಮತ್ತು ಮಾರ್ಚ್ ನಡೆಯಲಿದೆ. ಇದಕ್ಕೂ ಮುನ್ನ, ಅಕ್ಟೋಬರ್ 30 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಾಂಕೇತಿಕವಾಗಿ “ಸಾರ್ವಜನಿಕ ದೋಷಾರೋಪಣೆ” ಪ್ರಕ್ರಿಯೆಯನ್ನು ವಿರೋಧ ಪಕ್ಷಗಳು ಹಮ್ಮಿಕೊಂಡಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular