HomeKarnatakaಸರ್ಕಾರಿ ಉದ್ಯೋಗಕ್ಕಷ್ಟೇ ಸೀಮಿತವಾಗಬೇಡಿ, ಖಾಸಗಿ ಉದ್ಯೋಗಕ್ಕೂ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಸರ್ಕಾರಿ ಉದ್ಯೋಗಕ್ಕಷ್ಟೇ ಸೀಮಿತವಾಗಬೇಡಿ, ಖಾಸಗಿ ಉದ್ಯೋಗಕ್ಕೂ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ : ಪ್ರತಿಯೊಬ್ಬ ಶಾಲಾ ಮಕ್ಕಳಿಗೂ ಗ್ರಹಿಕೆ, ಕಲಿಕೆ ಮತ್ತು ಜೀವನದ ಗುರಿಯನ್ನು ಹೊಂದಿರಬೇಕು. ಯುವ ಜನತೆಯು ಸರ್ಕಾರಿ ಉದ್ಯೋಗಕ್ಕೆ ಸೀಮಿತವಾಗದೇ, ಖಾಸಗಿ ಉದ್ಯೋಗ ಪಡೆಯಲು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲ ಇಲಾಖೆಯ ಪ್ರಗತಿ ಕುರಿತು ಸಭೆ ಜರುಗಿಸಿ, ಮಾತನಾಡಿದರು.

ಶಾಲೆಯಲ್ಲಿ 1 ರಿಂದ 8 ನೇಯ ತರಗತಿಯ ವಿಧ್ಯಾರ್ಥಿಗಳಿಗೆ ಓದಲು ಕಡ್ಡಾಯವಾಗಿ ಬರಲೇಬೇಕು. ಪ್ರತಿಯೊಂದು ಮಗುವಿಗೂ ವಿಧ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಉತ್ತೇಜಿಸಬೇಕು. ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಒಂದು ಶಾಲೆ ಅಥವಾ ಒಂದು ವಸತಿ ನಿಲಯವನ್ನು ದತ್ತು ತೆಗೆದುಕೊಂಡು, ತಿಂಗಳಲ್ಲಿ ಒಂದು ದಿನ ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ತಿಳಿದು ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಬೇಕು. ಬೇರೆ ಬೇರೆ ಉದ್ಯೋಗ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಒಂದು ಶಾಲೆ, ಒಂದು ಕಲೆ, ಒಂದು ಕ್ರೀಡೆ ಎಂಬಂತೆ ಒಳ್ಳೆಯ ಉದ್ದೇಶದಿಂದ ಎಲ್ಲರೂ ಒಗ್ಗೂಡಿ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಒಂದೇ ಉದ್ಯೋಗಕ್ಕೆ ತಯಾರಿ ನಡೆಸದೇ, ಎಲ್ಲ ಖಾಸಗಿ ಉದ್ಯೋಗವನ್ನು ಪಡೆಯಲು ಪ್ರಯತ್ನಿಸಬೇಕು. ಸರ್ಕಾರದ ಯೋಜನೆಗಳ ಜೊತೆಗೆ ನಾವು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿ, ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡೋಣ. ಎಲ್ಲ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಭುವನೇಶ ಪಾಟೀಲ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತೇಜನ, ಪ್ರೇರಣೆ ನೀಡುವುದರಿಂದ ಜೊತೆಗೆ ಒಳ್ಳೆಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು ಮತ್ತು ಪುಸ್ತಕಗಳ ಬಗ್ಗೆ ಮಾಹಿತಿ ನೀಡಬೇಕು. ಪಿಯುಸಿ, ಪದವಿ ಪಾಸ್ ಆದಂತಹ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸರ್ಕಾರದ ಉದ್ಯೋಗ ಅಥವಾ ಖಾಸಗಿ ಉದ್ಯೋಗದ ತರಬೇತಿ ಅರಿವು ಕಾರ್ಯಕ್ರಮಗಳನ್ನು ನೀಡಬೇಕು. ವೃತ್ತಿ ತರಬೇತಿ ನೀಡಬೇಕು. ಈಗೀನ ಯುವಕ, ಯುವತಿಯರು ಇಂಟರ್ನೆಟ್ ಸೌಲಭ್ಯವನ್ನು ದುರ್ಬಳಕೆ ಮಾಡದೆ, ತಮ್ಮ ಜೀವನದ ಒಳ್ಳೆಯ ಗುರಿ, ಉದ್ದೇಶಗಳಿಗೆ ಉಪಯೋಗ ಮಾಡಿಕೊಳ್ಳಬೇಕು. ಪ್ರತಿಯೊಂದು ಶಾಲಾ, ಕಾಲೇಜು ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ಓದಲು ರೂಢಿಸಿಕೊಳ್ಳಲು ತಿಳಿಸಬೇಕು. ಎಲ್ಲ ಶಾಲಾ, ಕಾಲೇಜುಗಳಲ್ಲಿ ಶೌಚಾಲಯ ಮತ್ತು ನೀರು ಕಡ್ಡಾಯವಾಗಿ ಪೂರೈಸಬೇಕು ಎಂದು ಅವರು ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಮಾತನಾಡಿ, ಶಾಲೆಗಳಲ್ಲಿ ಓದಿಗೆ ಅಷ್ಟೇ ಪ್ರಾಮುಖ್ಯತೆ ನೀಡದೆ, ಕ್ರೀಡೆಗಳಿಗೂ ಪ್ರಾಮುಖ್ಯತೆಯನ್ನು ನೀಡಬೇಕು. ಪೋಷಕರು ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರುವುದಿಲ್ಲ. ಶಾಲೆಯ ಶಿಕ್ಷಕರು ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಗಮನ ಕೊಟ್ಟು ಅವರ ಜೀವನದ ಯಶಸ್ಸಿಗೆ ಕಾರಣರಾಗಬೇಕು. ಎಲ್ಲ ಶಾಲೆಗಳಲ್ಲಿ ಪಠ್ಯಕ್ರಮಗಳ ಜೊತೆಗೆ ಡಿಜಿಟಲ್ ಕೌಶಲ್ಯಗಳ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಪ್ರೌಢಶಾಲೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಂತೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ., ಅರಣ್ಯ ಇಲಾಖೆಯ ಡಿಎಫ್‍ಓ ಪ್ರಾದೇಶಿಕ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಶೇಕ್ ಅಲಿಂ ಸಿದ್ದಿಕ್ಕಿ ಅವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular